ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನಾಂಗೀಯ ಕಲಹದಿಂದ ನಲುಗಿದ ಈಶಾನ್ಯ ರಾಜ್ಯಗಳು: ರಾಹುಲ್‌ ಗಾಂಧಿ

Published 15 ಫೆಬ್ರುವರಿ 2024, 22:26 IST
Last Updated 15 ಫೆಬ್ರುವರಿ 2024, 22:26 IST
ಅಕ್ಷರ ಗಾತ್ರ

ಔರಂಗಾಬಾದ್‌: ‘ಒಂದು ಸಮುದಾಯದ ವಿರುದ್ಧ ಇನ್ನೊಂದು ಸಮುದಾಯವನ್ನು ಎತ್ತಿಕಟ್ಟುವ ಮೂಲಕ ಮಣಿಪುರದಲ್ಲಿ ಬೆಂಕಿ ಹೊತ್ತಿಕೊಳ್ಳುವಂತೆ ಮಾಡಲಾಯಿತು. ಕಳೆದ ವರ್ಷದ ಮೇ ತಿಂಗಳಿನಿಂದ ಈಶಾನ್ಯ ರಾಜ್ಯಗಳು ಜನಾಂಗೀಯ ಕಲಹದಿಂದ ನಲುಗಿವೆ’ ಎಂದು ಕಾಂಗ್ಹೆಸ್‌ ಮುಖಂಡ ರಾಹುಲ್‌ ಗಾಂಧಿ ಆರ್‌ಎಸ್‌ಎಸ್‌ ಮತ್ತು ಬಿಜೆಪಿ ವಿರುದ್ಧ ಕಿಡಿಕಾರಿದರು.

ಔರಂಗಾಬಾದ್‌ನಲ್ಲಿ ನಡೆಯುತ್ತಿರುವ ಭಾರತ್‌ ಜೋಡೋ ನ್ಯಾಯ ಯಾತ್ರೆಯಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತರು ನಡೆಸುತ್ತಿರುವ ‘ದೆಹಲಿ ಚಲೋ’ ಪ್ರತಿಭಟನಾ ಮೆರವಣಿಗೆಗೆ ಬೆಂಬಲವನ್ನೂ ವ್ಯಕ್ತಪಡಿಸಿದರು.

‘ಶ್ರೀಮಂತರ ₹14 ಲಕ್ಷ ಕೋಟಿ ಸಾಲವನ್ನು ಮನ್ನಾ ಮಾಡಿರುವ ಕೇಂದ್ರ ಸರ್ಕಾರ ನರೇಗಾಕ್ಕೆ ವೆಚ್ಚ ಮಾಡಿರುವುದು ಕೇವಲ ₹70,000 ಕೋಟಿ’ ಎಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗಣ್ಯರನ್ನು ಆಹ್ವಾನಿಸಿರುವುದಕ್ಕೆ ಸರ್ಕಾರವನ್ನು ಟೀಕಿಸಿದ ರಾಹುಲ್‌ ಗಾಂಧಿ, ‘ಕಾರ್ಯಕ್ರಮದಲ್ಲಿ ಬಡವರ ಅನುಪಸ್ಥಿತಿ ಎದ್ದು ಕಾಣುತ್ತಿತ್ತು’ ಎಂದಿದ್ದಾರೆ.

ಮುಂದುವರಿದ ನ್ಯಾಯ ಯಾತ್ರೆ: ರಾಹುಲ್‌ ಗಾಂಧಿಯವರ ಭಾರತ್‌ ಜೋಡೋ ನ್ಯಾಯ ಯಾತ್ರೆಯು ಮುಂದುವರೆದಿದ್ದು, ಯಾತ್ರೆಯ ಭಾಗವಾಗಿ ಗುರುವಾರ ಔರಂಗಾಬಾದ್‌ನಲ್ಲಿ ಸಾರ್ವಜನಿಕ ಸಭೆ
ನಡೆಯಿತು. 

‘ಶುಕ್ರವಾರ ಉತ್ತರಪ್ರದೇಶ ಗಡಿ ಸಮೀಪದ ಕೈಮುರ ಜಿಲ್ಲೆಗೆ ಯಾತ್ರೆ ಸಾಗಲಿದೆ’ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಪ್ರೇಮ್‌ ಚಂದ್ರ ಮಿಶ್ರಾ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT