ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಜಮ್ಮು–ಕಾಶ್ಮೀರ, ಹಿಮಾಚಲ ಪ್ರದೇಶ, ಪಂಜಾಬ್ ಹಾಗೂ ದೆಹಲಿಯಲ್ಲಿ ನದಿಗಳು ಉಕ್ಕಿ ಹರಿಯುತ್ತಿವೆ. ಪಂಜಾಬ್‌ನಲ್ಲಿ ಪ್ರವಾಹ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದ್ದರೆ, ದೆಹಲಿಯಲ್ಲಿ ಯಮುನಾ ನದಿ ನೀರಿನ ಮಟ್ಟ ಹೆಚ್ಚಾಗಿ ಪ್ರವಾಹದ ಆತಂಕ ಎದುರಾಗಿದೆ. ಮನೆಗಳು ಕುಸಿದು, ಹಿಮಾಚಲ ಪ್ರದೇಶದಲ್ಲಿ ಐವರು ಸಾವಿಗೀಡಾಗಿದ್ದಾರೆ.