ಫುಕೆಟ್(ಥಾಯ್ಲೆಂಡ್): ಏರ್ ಇಂಡಿಯಾ ಎಕ್ಸ್ಪ್ರೆಸ್ ಸಂಸ್ಥೆಗೆ ಸೇರಿದ ವಿಮಾನವೊಂದು ಬುಧವಾರ ಥಾಯ್ಲೆಂಡ್ನ ಫುಕೆಟ್ ವಿಮಾನ ನಿಲ್ದಾಣದಲ್ಲಿ 'ಹಾರ್ಡ್ ಲ್ಯಾಂಡಿಂಗ್' ಮಾಡಿದ್ದು, ಮುಂಭಾಗದ ಎರಡು ಚಕ್ರಗಳು (ನೋಸ್ ವೀಲ್ಸ್) ಕಳಚಿಕೊಂಡಿವೆ.

‘ಹೈದರಾಬಾದ್ನಿಂದ ಫುಕೆಟ್ಗೆ ಹಾರಾಟ ನಡೆಸುತ್ತಿದ್ದ ‘ಬೋಯಿಂಗ್ 737– ಮ್ಯಾಕ್ಸ್ 8’ ವಿಮಾನದ ಮುಂದಿನ ಎರಡು ಚಕ್ರಗಳು ಕಳಚಿ ಹೋಗಿವೆ. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದು, ಯಾವುದೇ ಗಾಯಗಳಾಗಿಲ್ಲ’ ಎಂದು ಡಿಜಿಸಿಎ ಅಧಿಕಾರಿಗಳು ತಿಳಿಸಿದ್ದಾರೆ.

‘ಥಾಯ್ಲೆಂಡ್ ವಿಮಾನಯಾನ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ನಂತರ ಸಂಬಂಧಿತ ಪ್ರಾಧಿಕಾರದಿಂದ ಈ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು’ ಎಂದು ಅವರು ತಿಳಿಸಿದ್ದಾರೆ.

‘ವಿಮಾನವು ರನ್ವೇಯಲ್ಲಿ ಸಿಲುಕಿಕೊಂಡಿದ್ದು, ನಿಲುಗಡೆ ಜಾಗಕ್ಕೆ ಎಳೆದುಕೊಂಡು ಹೋಗುವ ಪ್ರಕ್ರಿಯೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ’ ಎಂದು ಫುಕೆಟ್ ವಿಮಾನ ನಿಲ್ದಾಣದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನು, ಅವಘಡದ ಬಗ್ಗೆ ಪ್ರತಿಕ್ರಿಯಿಸಿರುವ ಏರ್ ಇಂಡಿಯಾ ಎಕ್ಸ್ಪ್ರೆಸ್, ‘ಲ್ಯಾಂಡಿಂಗ್ ವೇಳೆ ವಿಮಾನದ ಮುಂಭಾಗದ ಚಕ್ರದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ. ಸುರಕ್ಷತಾ ನಿಯಮಗಳನ್ನು ಪಾಲಿಸುವ ಮೂಲಕ ನಮ್ಮ ಸಿಬ್ಬಂದಿ, ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಸುವಲ್ಲಿ ಯಶಸ್ವಿಯಾಗಿದ್ದಾರೆ’ ಎಂದು ಹೇಳಿದೆ.

ನಿಯಮಿತ ನಿರ್ವಹಣೆಯ ಭಾಗವಾಗಿ ಮಾ. 8 ರಂದು ವಿಮಾನದ ಎರಡೂ ಚಕ್ರಗಳನ್ನು ಬದಲಾಯಿಸಲಾಗಿತ್ತು ಎಂದು ತಿಳಿದುಬಂದಿದೆ.

ವಿಮಾನದಲ್ಲಿದ್ದ ಒಟ್ಟು ಪ್ರಯಾಣಿಕರ ಸಂಖ್ಯೆ ತಕ್ಷಣಕ್ಕೆ ಲಭ್ಯವಾಗಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.