ಚೆನ್ನೈ: ಸಭೆಯಲ್ಲಿ ಮೇಕೆದಾಟು ಅಣೆಕಟ್ಟೆ ನಿರ್ಮಾಣದ ಬಗ್ಗೆ ಚರ್ಚಿಸುವುದು ಸರಿಯಾದ ಕ್ರಮ ಅಲ್ಲ ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (CWM) ಸರ್ಕಾರ ತಿಳಿಸಿದೆ ಎಂದು ರಾಜ್ಯದ ಜಲ ಸಂಪನ್ಮೂಲ ಸಚಿವ ದುರೈಮುರುಗನ್ ಬುಧವಾರ ತಮಿಳುನಾಡು ವಿಧಾನಸಭೆಗೆ ತಿಳಿಸಿದ್ದಾರೆ.
ಮೇಕೆದಾಟು ಎಂಬಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಜಲಾಶಯ ನಿರ್ಮಿಸುವ ಪ್ರಸ್ತಾವನೆಯನ್ನು ಪ್ರಾಧಿಕಾರದ ಸಭೆಯ ಅಜೆಂಡಾದಲ್ಲಿ ಪದೇ ಪದೇ ಪ್ರಸ್ತಾಪಿಸಿ, ಚರ್ಚೆ ಮಾಡಿದ್ದಕ್ಕೆ ಪ್ರತಿಭಟನೆ ವ್ಯಕ್ತಪಡಿಸಿದ್ದೇವೆ ಎಂದು ಅವರು ಹೇಳಿದ್ದಾರೆ.