ಕೋಲ್ಕತ್ತ: ಇಲ್ಲಿನ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ, ಕೊಲೆಗೈದ ಅಪರಾಧಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದ್ದರ ಬಗ್ಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ನ್ಯಾಯಾಲಯವು ನೀಡಿದ ತೀರ್ಪು ತೃಪ್ತಿ ತಂದಿಲ್ಲ. ಅಪರಾಧಿಗೆ ಮರಣದಂಡನೆ ವಿಧಸಬೇಕಿತ್ತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
.ಗರ್ಲ್ಫ್ರೆಂಡ್ ಜೊತೆ ಮದುವೆಗೆ ಹಿಂದೂ ಧರ್ಮಕ್ಕೆ ಮತಾಂತರ: ಸದ್ಧಾಂ ಈಗ ಶಿವಶಂಕರ್.ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ.
‘ನಾವೆಲ್ಲರೂ ಅಪರಾಧಿಗೆ ಮರಣದಂಡನೆ ವಿಧಿಸಬೇಕು ಎಂದು ಒತ್ತಾಯಿಸಿದ್ದೆರ್ಮ. ಆದರೆ ನ್ಯಾಯಾಲಯವು ಅಪರಾಧಿಗೆ ಜೀವಾವಧಿ ಶಿಕ್ಷೆ ನೀಡಿದೆ. ಈ ಪ್ರಕರಣವನ್ನು ರಾಜ್ಯ ಪೊಲೀಸರಿಂದ ತನಿಖೆ ನಡೆಸಿದ್ದರೆ, ಆತನಿಗೆ ಮರಣ ದಂಡನೆ ಶಿಕ್ಷೆಯಾಗುತ್ತಿತ್ತು. ರಾಜ್ಯ ಪೊಲೀಸರಿಂದ ತನಿಖೆ ನಡೆಸಲಾದ ಅನೇಕ ಪ್ರಕರಣಗಳಲ್ಲಿ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ಆದರೆ ಸಿಬಿಐ ಹೇಗೆ ತನಿಖೆ ನಡೆಸಿದೆ ಎಂದು ನನಗೆ ತಿಳಿದಿಲ್ಲ ಎಂದೂ ತನಿಖಾ ಸಂಸ್ಥೆಯ ಬಗ್ಗೆಯೂ ಮಮತಾ ಅನುಮಾನ ವ್ಯಕ್ತಪಡಿಸಿದ್ದಾರೆ.

ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ಸೆಕ್ಷನ್ 103(1)ರ ಅಡಿಯಲ್ಲಿ ಸಂಜಯ್ ರಾಯ್ಗೆ ಜೀವಾವಧಿ ಶಿಕ್ಷೆ ಹಾಗೂ ₹50,000 ದಂಡ ವಿಧಿಸಲಾಗಿದೆ ಎಂದು ಸಿಯಾಲದಹ ನ್ಯಾಯಾಲಯದ ನ್ಯಾಯಾಧೀಶ ಅನಿರ್ಬನ್ ದಾಸ್ ತಿಳಿಸಿದ್ದಾರೆ.

ಕಳೆದ ವರ್ಷ ಆಗಸ್ಟ್ನಲ್ಲಿ ನಡೆದ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ರಾಯ್ ತಪ್ಪಿತಸ್ಥನೆಂದು ಶನಿವಾರ ನ್ಯಾಯಾಲಯ ತೀರ್ಪು ನೀಡಿತ್ತು.
.Delhi Polls| ಕೇಜ್ರಿವಾಲ್ರಿಂದ ಹಣ, ಸೀರೆ, ಕುರ್ಚಿ ಹಂಚಿಕೆ ಆರೋಪ: ಬಿಜೆಪಿ ದೂರು.ನೈಜೀರಿಯಾ | ಟ್ಯಾಂಕರ್ ಪಲ್ಟಿ, ಸ್ಫೋಟ; ಪೆಟ್ರೋಲ್ ತುಂಬಿಕೊಳ್ಳಲು ಹೋದವರು ಸಾವು.ಕ್ರಿಕೆಟರ್ ರಿಂಕು ಸಿಂಗ್ ವರಿಸಲಿರುವ ಸಂಸದೆ ಪ್ರಿಯಾ ಸರೋಜ್: ಖಚಿತಪಡಿಸಿದ ಕುಟುಂಬ.ಮಂಡ್ಯ | ಕೆಎಸ್ಆರ್ಟಿಸಿ ಬಸ್ ಪಲ್ಟಿ: 33 ಪ್ರಯಾಣಿಕರಿಗೆ ಗಾಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.