ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

J&K: ಮೊದಲ ಹಂತದ ವಿಧಾನಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟ; ಮಾಹಿತಿ ಇಲ್ಲಿದೆ

Published 20 ಆಗಸ್ಟ್ 2024, 7:41 IST
Last Updated 20 ಆಗಸ್ಟ್ 2024, 7:41 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.

ಒಟ್ಟು 90 ಕ್ಷೇತ್ರಗಳ ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಗೆ ಸೆ.18ರಂದು 24 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯಲಿದೆ.

ಆಯೋಗ ಅಧಿಸೂಚನೆ ಹೊರಡಿಸಿದ ಹಿನ್ನೆಲೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಆರಂಭಿಸಬಹುದು. ಆ.27 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಆ.28 ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಆ.30 ಕೊನೆಯ ದಿನವಾಗಿದೆ.

ಮೊದಲ ಹಂತದಲ್ಲಿ ದಕ್ಷಿಣ ಕಾಶ್ಮೀರದ ಕಣಿವೆಯ 16 ಮತ್ತು ಜಮ್ಮು ಪ್ರದೇಶದ 8 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

90 ಕ್ಷೇತ್ರಗಳಲ್ಲಿ 74 ಸಾಮಾನ್ಯ ಕ್ಷೇತ್ರಗಳು, 7 ಪರಿಶಿಷ್ಟ ಜಾತಿ ಹಾಗೂ 9 ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೀಸಲು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT