ತೆಂಕಾಶಿ/ತಿರುವನಂತಪುರ: ಚುನಾವಣಾ ಆಯೋಗವು ನ.4ರಿಂದ ನಡೆಸಲಿರುವ ಎರಡನೇ ಹಂತದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ (ಎಸ್ಐಆರ್) ತಮಿಳುನಾಡು ಹಾಗೂ ಕೇರಳ ಸರ್ಕಾರಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ.

ಎಸ್ಐಆರ್ ವಿರುದ್ಧ ಹೋರಾಟ ರೂಪಿಸಲು ಹಾಗೂ ಮುಂದಿನ ಕ್ರಮ ಕೈಗೊಳ್ಳಲು ಸರ್ವಪಕ್ಷಗಳ ಸಭೆಗಳನ್ನು ಕರೆದಿವೆ.

‘ತಮಿಳುನಾಡಿನಲ್ಲಿ ನ.2ರಂದು ಸರ್ವಪಕ್ಷಗಳ ಸಭೆ ಆಯೋಜಿಸಲಾಗಿದ್ದು, ಇದು ಪ್ರಜಾಪ್ರಭುತ್ವವನ್ನು ರಕ್ಷಿಸುವ ಪ್ರಯತ್ನವಾಗಿದೆ. ರಾಜಕೀಯ ಭಿನ್ನಾಭಿಪ್ರಾಯವನ್ನು ಬದಿಗಿಟ್ಟು ಎಲ್ಲ ಪಕ್ಷಗಳು ಪಾಲ್ಗೊಳ್ಳಬೇಕು’ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮನವಿ ಮಾಡಿದ್ದಾರೆ.

‘ತಮಿಳುನಾಡಿನ ಜನರ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಜೆಪಿ ಪ್ರಯತ್ನಿಸುತ್ತಿದ್ದು, ಇದರ ವಿರುದ್ಧ ನಾವು ಜಯಿಸುತ್ತೇವೆ. ತಮಿಳುನಾಡಿನ ಜನರ ಮತದಾನದ ಹಕ್ಕನ್ನು ರಕ್ಷಿಸುತ್ತೇವೆ’ ಎಂದು ಹೇಳಿದ್ದಾರೆ.

ಕೇರಳದಲ್ಲಿ ನ.5ರಂದು ಸಭೆ

ಸಿಪಿಎಂ ನೇತೃತ್ವದ ಎಲ್ಡಿಎಫ್ ಸರ್ಕಾರವು ನ.5ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ.

‘ಸ್ಥಳೀಯ ಸಂಸ್ಥೆಗಳ ಚುನಾವಣೆ ಸಂದರ್ಭದಲ್ಲಿ ಎಸ್ಐಆರ್ ಜಾರಿಗೊಳಿಸುವುದರಿಂದ ಉಂಟಾಗುವ ಪ್ರಾಯೋಗಿಕ ಸಮಸ್ಯೆಗಳ ಕುರಿತು ಚುನಾವಣಾ ಅಧಿಕಾರಿಗಳು ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಚುನಾವಣಾ ಆಯೋಗಕ್ಕೆ ತಿಳಿಸಿದ್ದರು. ಆದರೆ, ರಾಜ್ಯದ ಕಾಳಜಿಯನ್ನು ಆಯೋಗವು ನಿರ್ಲಕ್ಷಿಸಿದೆ. ಇದನ್ನು ಎಲ್ಲರೂ ಬಲವಾಗಿ ವಿರೋಧಿಸಬೇಕು. ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸರ್ವಪಕ್ಷಗಳ ಸಭೆಯಲ್ಲಿ ಚರ್ಚಿಸಲಾಗುವುದು’ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

ಕೇರಳ ಮುಖ್ಯ ಚುನಾವಣಾಧಿಕಾರಿ ರತನ್ ಯು. ಕೇಳ್ಕರ್ ಅವರು ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಬುಧವಾರ ಸಭೆ ನಡೆಸಿದರು.

‘ಸ್ಥಳೀಯ ಸಂಸ್ಥೆಗಳ ಚುನಾವಣೆ ಮೇಲೆ ಪರಿಣಾಮ ಬೀರದಂತೆ ಎಸ್ಐಆರ್ ಪ್ರಕ್ರಿಯೆ ನಡೆಸಲು ಹೆಚ್ಚಿನ ಅಧಿಕಾರಿಗಳನ್ನು ನೇಮಿಸಲಾಗುವುದು’ ಎಂದು ಕೇಳ್ಕರ್ ಹೇಳಿದರು.

‘ಸ್ಥಳೀಯ ಸಂಸ್ಥೆ ಚುನಾವಣೆ ಹಾಗೂ ಎಸ್ಐಆರ್ ಪ್ರಕ್ರಿಯೆ ಒಟ್ಟಿಗೆ ನಡೆಯುವಂತಹ ಪರಿಸ್ಥಿತಿ ಬಂದರೆ, ಅಧಿಕಾರಿಗಳು ಎರಡೂ ಕಡೆ ಭಾಗವಹಿಸಬೇಕಾಗುತ್ತದೆ. ಹೀಗಾಗಿ, ಎಸ್ಐಆರ್ ಪ್ರಕ್ರಿಯೆಯನ್ನು ಮುಂದೂಡಬೇಕು ಎಂದು ಸಿಪಿಎಂ ಹಾಗೂ ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ.

‘ಈ ವಿಷಯವು ನ್ಯಾಯಾಲಯದಲ್ಲಿ ಬಾಕಿ ಇರುವಾಗ, ಅನೇಕ ರಾಜ್ಯಗಳಲ್ಲಿ ಎಸ್ಐಆರ್ ಜಾರಿಗೆ ಮುಂದಾಗಿರುವುದರ ಹಿಂದೆ ದುರುದ್ದೇಶ ಅಡಗಿದೆ. ರಾಷ್ಟ್ರೀಯ ನಾಗರಿಕ ನೋಂದಣಿ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸುವ ಬಿಜೆಪಿಯ ಕಾರ್ಯಸೂಚಿಯ ಭಾಗವಾಗಿದೆ’ ಎಂದು ಸಿಪಿಎಂ ನಾಯಕ ಎಂ.ವಿ. ಜಯರಾಜನ್ ಹಾಗೂ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸನ್ನಿ ಜೋಸೆಫ್ ಆರೋಪಿಸಿದ್ದಾರೆ.

ಮತದಾರರ ಪಟ್ಟಿಯನ್ನು ಸ್ವಚ್ಛಗೊಳಿಸಲು ಕೈಗೊಂಡಿರುವ ಎಸ್ಐಆರ್ ಪ್ರಕ್ರಿಯೆಯನ್ನು ಸಿಪಿಎಂ ಹಾಗೂ ಕಾಂಗ್ರೆಸ್ ವಿರೋಧಿಸುತ್ತಿರುವುದು ಆಶ್ಚರ್ಯಕರವಾಗಿದೆ.
– ಎಸ್.ಸುರೇಶ್, ಪ್ರಧಾನ ಕಾರ್ಯದರ್ಶಿ ಬಿಜೆಪಿ ರಾಜ್ಯ ಘಟಕ

ಕೇರಳದಲ್ಲಿ ಎಸ್ಐಆರ್: ಪ್ರಿಯಾಂಕಾ ವಿರೋಧ

ವಯನಾಡ್: ‘ಚುನಾವಣಾ ಆಯೋಗವು ಕೇರಳದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಮಾಡಲು ಮುಂದಾಗಿದ್ದು ಇದನ್ನು ನಾವು ಬಲವಾಗಿ ವಿರೋಧಿಸುತ್ತೇವೆ’ ಎಂದು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ಹೇಳಿದರು.

‘ಎಸ್ಐಆರ್ ಕ್ರಮವು ಚುನಾವಣೆಯಲ್ಲಿ ವಂಚನೆ ಎಸಗಲು ಇರುವ ಏಕೈಕ ಮಾರ್ಗ. ಬಿಹಾರದಲ್ಲಿ ನಡೆಸಲಾದ ಎಸ್ಐಆರ್ ಪ್ರಕ್ರಿಯೆಯು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಪ್ರಯತ್ನದ ಭಾಗವಾಗಿತ್ತು. ಅಲ್ಲಿ ಎಸ್ಐಆರ್ ಅನ್ನು ಹೇಗೆ ಜಾರಿ ಮಾಡಿದ್ದರು ಎಂಬುದನ್ನು ನಾವು ನೋಡಿದ್ದೇವೆ. ಅವರು ಪ್ರತಿ ರಾಜ್ಯದಲ್ಲೂ ಹಾಗೆ ಮಾಡಲಿದ್ದಾರೆ. ಅದು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ. ಇದರ ವಿರುದ್ಧ ನಾವೆಲ್ಲರೂ ಹೋರಾಡಬೇಕಿದೆ’ ಎಂದು ತಿಳಿಸಿದ್ದಾರೆ.

ಮತದಾನ ಕೇಂದ್ರಗಳ ಸಂಖ್ಯೆ ಹೆಚ್ಚಳ

ನವದೆಹಲಿ: ಚುನಾವಣಾ ಆಯೋಗವು 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮುಂದಿನ ವಾರದಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ನಡೆಸಲಿದ್ದು ಈ ಪ್ರಕ್ರಿಯೆ ಪೂರ್ಣಗೊಂಡ ನಂತರ ಮತಗಟ್ಟೆಗಳ ಸಂಖ್ಯೆ ಹೆಚ್ಚಾಗಲಿದೆ. ಬಿಹಾರದಲ್ಲಿ ಎಸ್ಐಆರ್ ಪ್ರಕ್ರಿಯೆ ಪೂರ್ಣಗೊಂಡಿದ್ದು ಪ್ರತಿ ಮತಗಟ್ಟೆಯಲ್ಲಿ ಗರಿಷ್ಠ 1200 ಮತದಾರರನ್ನು ಹೊಂದಿರುವ ದೇಶದ ಮೊದಲ ರಾಜ್ಯವಾಗಿದೆ.

ಈ ಮೊದಲು ಪ್ರತಿ ಮತಗಟ್ಟೆಯಲ್ಲಿ 1500 ಮತದಾರರಿದ್ದರು. ಎಸ್ಐಆರ್ ಬಳಿಕ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಬಿಹಾರದ ಮಾದರಿಯಲ್ಲಿ ಹೆಚ್ಚಿನ ಮತಗಟ್ಟೆಗಳನ್ನು ಹೊಂದಲಿವೆ. ಅಲ್ಲಿ ಈ ಹಿಂದೆ ಇದ್ದ ಮತಗಟ್ಟೆಗಳ ಸಂಖ್ಯೆಯು 77895ರಿಂದ 90712ಕ್ಕೆ ಏರಿಕೆಯಾಗಲಿದೆ. ಮತದಾರರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಲು ಸರದಿಯಲ್ಲಿ ಕಾಯುವ ಸಮಯವನ್ನು ಕಡಿಮೆಗೊಳಿಸುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.