ನವದೆಹಲಿ: ಕೇಂದ್ರ ಸರ್ಕಾರ ತನ್ನ ಮಹತ್ವಾಕಾಂಕ್ಷಿ ‘ಬೇಟಿ ಬಚಾವೊ, ಬೇಟಿ ಪಡಾವೊ’ ಯೋಜನೆಯನ್ನು ಪರಿಷ್ಕರಿಸಿ, ಅದರಲ್ಲಿ ಮುಟ್ಟಿನ ನೈರ್ಮಲ್ಯದ ಕುರಿತ ಅರಿವು, ಬಾಲಕಿಯರ ಕೌಶಲ ಹೆಚ್ಚಳ, ಬಾಲ್ಯ ವಿವಾಹ ತಡೆಗಟ್ಟುವಿಕೆ, ಮಾಧ್ಯಮಿಕ ಶಿಕ್ಷಣದಲ್ಲಿ ಹೆಣ್ಣುಮಕ್ಕಳ ದಾಖಲಾತಿ ಹೆಚ್ಚಳ ಮುಂತಾದ ವಿಷಯಗಳನ್ನು ಸೇರ್ಪಡೆ ಮಾಡಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.