ಶಹಾಪುರ (ಯಾದಗಿರಿ ಜಿಲ್ಲೆ): ‘ಕೇಂದ್ರ ಸರ್ಕಾರ ವಿಬಿ–ಜಿ ರಾಮ್ ಜಿ ಕಾಯ್ದೆ ರದ್ದುಗೊಳಿಸಿ ಹಿಂದಿನ ನರೇಗಾ ಯೋಜನೆ ಮರುಜಾರಿ ಮಾಡದಿದ್ದರೆ, ಹಿಂದೆ ಕೃಷಿ ಕಾಯ್ದೆಗಳ ರದ್ದತಿ ಮಾದರಿಯಲ್ಲಿ ಹೋರಾಟ ನಡೆಯಲಿದೆ’ ಎಂದು ಅಖಿಲ ಭಾರತ ಕೃಷಿ ಕೂಲಿಕಾರರ ಸಂಘದ ಜಂಟಿ ಕಾರ್ಯದರ್ಶಿ ವಿ.ಶಿವದಾಸನ್ ಹೇಳಿದರು.

ಭಾನುವಾರ ಇಲ್ಲಿ ನಡೆದ ಅಖಿಲ ಭಾರತ ಕೃಷಿ ಕೂಲಿಕಾರರ ಸಂಘದ 9ನೇ ರಾಜ್ಯ ಸಮ್ಮೇಳನದ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.

‘ಹಿಂದೆ ದೆಹಲಿಯಲ್ಲಿ ಸತತವಾಗಿ ಹೋರಾಟದಿಂದ ಮೂರು ಕೃಷಿ ಕಾಯ್ದೆಗಳು ರದ್ದುಗೊಂಡವು. ಕೂಲಿಕಾರ್ಮಿಕರು ಎಲ್ಲರೂ ಒಗ್ಗೂಡಿ ಮತ್ತೊಂದು ಹೋರಾಟದ ಭಾಗವಾಗಿ ಮೇ 15ರಂದು ನರೇಗಾ ಮರುಜಾರಿಗೆ ಒತ್ತಾಯಿಸಿ ದೇಶವ್ಯಾಪಿ ಪ್ರತಿಭಟನೆ ನಡೆಸಲಾಗುವುದು’ ಎಂದರು.

ಸಂಘದ ಪ್ರಧಾನ ಕಾರ್ಯದರ್ಶಿ ವಿ.ವೆಂಕಟ್ ಅವರು, ‘ಬಿಜೆಪಿಯನ್ನು ಅಧಿಕಾರದಿಂದ ದೂರ ಇರಿಸಲು ರಾಜ್ಯದಲ್ಲಿ ಕಾಂಗ್ರೆಸ್ಗೆ ಬೆಂಬಲಿಸಿದ್ದೆವು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಈಗ ಬಿಜೆಪಿಯ ಹಾದಿಯಲ್ಲಿ ಸಾಗುತ್ತಿದ್ದಾರೆ. ಗ್ಯಾರಂಟಿಗಳ ಹೆಸರಿನಲ್ಲಿ ವಂಚಿಸಿದ್ದು, ಕೃಷಿ ಕಾರ್ಮಿಕರ ರಕ್ಷಣೆಗೆ ಮುಂದಾಗುತ್ತಿಲ್ಲ’ ಎಂದರು.

ಬಹಿರಂಗ ಸಭೆಗೂ ಮುನ್ನ ನಡೆದ ಮೆರವಣಿಗೆಯಲ್ಲಿ ಸಾವಿರಾರು ಕೆಂಪು ವಸ್ತ್ರಧಾರಿಗಳು, ರೈತರು, ಕೂಲಿಕಾರ್ಮಿಕರು ಕೆಂಪು ಬಾವುಟ ಹಿಡಿದು ಸಾಗಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-51-1628831059

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.