ಬೆಂಗಳೂರು: ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) ಕಾಯ್ದೆಯನ್ನು ಮುಂದುವರಿಸಲು ಮತ್ತು ಈ ಕುರಿತು ಕ್ರಿಯಾ ಯೋಜನೆ ಸಿದ್ಧಪಡಿಸಲು ಅವಕಾಶ ಕಲ್ಪಿಸಬೇಕು’ ಎಂದು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ರಾಜ್ಯ ಸರ್ಕಾರ ಮುಂದಡಿ ಇಟ್ಟಿದೆ.

ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತ ನಿರ್ಣಯವನ್ನು ಸರ್ಕಾರ ತೆಗೆದುಕೊಂಡಿದೆ. ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ, ‘ಸಾರ್ವಜನಿಕ ಹಿತದೃಷ್ಟಿಯಿಂದ ‘ನರೇಗಾ ಕಾಯ್ದೆ– 2025’ ಅನ್ನು ಮುಂದುವರಿಸುವುದು ಅನಿವಾರ್ಯವಾಗಿದೆ’ ಎಂದರು.

‘ನರೇಗಾ ಕಾಯ್ದೆಯ ಬದಲು ಕೇಂದ್ರ ಸರ್ಕಾರ ವಿಬಿ ಜಿ ರಾಮ್ ಜಿ (ವಿಕಸಿತ ಭಾರತ್ – ಗ್ಯಾರಂಟಿ ಫಾರ್ ರೋಜ್ಗಾರ್ ಆ್ಯಂಡ್ ಆಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆಯನ್ನು ಜಾರಿಗೊಳಿಸಿದೆ. ಆದರೆ, ಈ ಕಾಯ್ದೆಯನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ಇನ್ನೂ ಅಧಿಸೂಚನೆ ಹೊರಡಿ ಸಿಲ್ಲ. ಪರ್ಯಾಯವಾದ ಯಾವುದೇ ವ್ಯವಸ್ಥೆಯನ್ನೂ ಮಾಡಿಲ್ಲ. ಕೇಂದ್ರ ಸರ್ಕಾರದ ಈ ನಿಲುವಿನ ಮೂಲಕ ರಾಜ್ಯ ಸರ್ಕಾರಗಳ ಸಾಂವಿಧಾನಿಕ ಹಕ್ಕುಗಳನ್ನು ದಮನಿಸಿ ದಂತಾಗಿದೆ. ಹೀಗಾಗಿ, ಈ ವಿಚಾರವನ್ನೂ ಕೋರ್ಟ್ನಲ್ಲಿ ಪ್ರಶ್ನಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ’ ಎಂದು ಅವರು ತಿಳಿಸಿದರು.

‘ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ ಜಿ ರಾಮ್ ಜಿ ಕಾಯ್ದೆಯ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮಂಡಿಸಿದ ಪ್ರಸ್ತಾವದ ಕುರಿತು ಸಭೆಯಲ್ಲಿ ವಿಸ್ಕೃತವಾಗಿ ಚರ್ಚಿಸಲಾಯಿತು. ವಿಬಿ ಜಿ ರಾಮ್ ಜಿ ಯೋಜನೆಯು ಕೇಂದ್ರ ಪುರಸ್ಕೃತ ಯೋಜನೆಯ ವ್ಯಾಪ್ತಿಯಲ್ಲಿ ಇದೆ. ಹೀಗಾಗಿ, ಈ ರೀತಿಯ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೊದಲು ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳ ಜೊತೆಗೆ ಸಮಾಲೋಚನೆ ನಡೆಸಬೇಕಾಗಿದೆ. ಆದರೆ, ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳ ಜೊತೆ ಸಮಾಲೋಚನೆ ಮಾಡದೆ ಏಕಾಏಕಿ, ನರೇಗಾ ಕಾಯ್ದೆಯನ್ನು ರದ್ದುಪಡಿಸಿ, ಹೊಸ ಕಾಯ್ದೆ ಜಾರಿಗೆ ತಂದಿದೆ. ಈ ಎಲ್ಲ ಅಂಶಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು’ ಎಂದರು.

‘ನರೇಗಾ ಯೋಜನೆಯು ಗ್ರಾಮೀಣ ಭಾಗದ ಜನರಿಗೆ ಮಹತ್ವದ ಯೋಜನೆಯಾಗಿದೆ. ಆದರೆ, ಮೇ ತಿಂಗಳು ಬಂದರೂ ಕೇಂದ್ರ ಸರ್ಕಾರ ವಿಬಿ ಜಿ ರಾಮ್ ಜಿ ಯೋಜನೆಯ ಕುರಿತಂತೆ ಅಧಿಸೂಚನೆ ಹೊರಡಿಸಿಲ್ಲ. ನರೇಗಾ ಬಾಕಿ ಕೆಲಸಗಳನ್ನು ಮುಂದುವರಿಸುವ ಬಗ್ಗೆ ಸುತ್ತೋಲೆ ಹೊರಡಿಸಿದ್ದರೂ, ಅದಕ್ಕೆ ಬೇಕಾದ ಯಾವುದೇ ಅನುದಾನ ಕೊಟ್ಟಿಲ್ಲ. ಮುಂಬರುವ ದಿನಗಳಲ್ಲಿ ಮಳೆಯ ಕೊರತೆ ಬಗ್ಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿರುವ ಕೇಂದ್ರ ಸರ್ಕಾರ, ಬಡವರ ಬಗ್ಗೆ ಯಾವುದೇ ಚಿಂತನೆ ಮಾಡಿಲ್ಲ. ಹೀಗಾಗಿ, ರಾಜ್ಯ ಸರ್ಕಾರ ನ್ಯಾಯಾಲಯದ ಕದ ತಟ್ಟಲು ತೀರ್ಮಾನಿಸಿದೆ’ ಎಂದೂ ಅವರು ಸಮರ್ಥಿಸಿಕೊಂಡರು.

‘ನರೇಗಾ ರದ್ದುಪಡಿಸಿದ ನಂತರ ಬಡ ಜನರಿಗೆ ಅನುಕೂಲ ಮಾಡಿಕೊಡಲು ಪರ್ಯಾಯ ವ್ಯವಸ್ಥೆಯನ್ನಾದರೂ ಕೇಂದ್ರ ಸರ್ಕಾರ ಮಾಡಬೇಕಿತ್ತು. ಅದನ್ನೂ ಮಾಡಿಲ್ಲ. ಆದ ಕಾರಣ, ಕಾರ್ಮಿಕರ, ಬಡವರ ಹಿತದೃಷ್ಟಿಯಿಂದ ನರೇಗಾ ಯೋಜನೆಯನ್ನೇ ಮುಂದುವರಿಸುವುದು ಅನಿವಾರ್ಯವಾಗಿದೆ. ಹೀಗಾಗಿ, ಕ್ರಿಯಾ ಯೋಜನೆ ಸಿದ್ಧಪಡಿಸಲು ಕೇಂದ್ರ ಸರ್ಕಾರವು ರಾಜ್ಯಕ್ಕೆ ಅವಕಾಶ ಕಲ್ಪಿಸಬೇಕು’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-51-1803388947

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.