ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಬಂಧನದಲ್ಲಿರಿಸಿದ್ದ ಕಾಶ್ಮೀರ ಚೇಂಬರ್ಸ್ ಆಫ್ ಕಾಮರ್ಸ್‌ನ ಮಾಜಿ ಅಧ್ಯಕ್ಷ ಡಾ. ಮುಬೀನ್ ಶಾ ಅವರನ್ನು ತಾತ್ಕಾಲಿಕವಾಗಿ ಮೂರು ತಿಂಗಳ ಅವಧಿಗೆ ಶನಿವಾರ ಬಿಡುಗಡೆಗೊಳಿಸಲಾಗಿದೆ.

‘ಜಮ್ಮು ಮತ್ತು ಕಾಶ್ಮೀರದ ಗೃಹ ಕಾರ್ಯದರ್ಶಿ ಆದೇಶ ಹೊರಡಿಸಿದ ಬಳಿಕ ಮಲೇಷ್ಯಾ ಪೌರತ್ವ ಹೊಂದಿರುವ ಅನಿವಾಸಿ ಭಾರತೀಯ ಮುಬೀನ್ ಅವರನ್ನು ಆಗ್ರಾದ ಕೇಂದ್ರೀಯ ಕಾರಾಗೃಹದಿಂದ ಬಿಡುಗಡೆಗೊಳಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘2020 ಮಾರ್ಚ್ 7ರಂದು ಶರಣಾಗುವಂತೆ’ ಅವರಿಗೆ ಸೂಚಿಸಲಾಗಿದೆ ಎಂದಿದ್ದಾರೆ.

ಮುಬೀನ್ ಅವರನ್ನು ಬಿಡುಗಡೆಗೊಳಿಸಬೇಕೆಂದು ಕೋರಿ ಅವರ ಸಹೋದರ ನಿಯಾಜ್, ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

ಆಗಸ್ಟ್ 5ರಂದು ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಇಲ್ಲಿನ ರಾಜಕಾರಣಿಗಳು, ಸಾಮಾಜಿಕ ಕಾರ್ಯಕರ್ತರು ಮತ್ತು ಉದ್ಯಮಿಗಳನ್ನು ಬಂಧನದಲ್ಲಿರಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.