ಗುರುಗ್ರಾಮ/ನೂಹ್: ನೂಹ್ ಜಿಲ್ಲೆಯಲ್ಲಿ ಸಂಭವಿಸಿದ ಕೋಮು ಗಲಭೆಗಳಿಗೆ ಸಂಬಂಧಿಸಿ ಬಂಧಿಸಲಾಗಿರುವ ಗೋರಕ್ಷಕ ಬಿಟ್ಟು ಬಜರಂಗಿ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನೂಹ್ ನ್ಯಾಯಾಲಯ ಗುರುವಾರ ಆದೇಶಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
‘ಬಜರಂಗಿಯನ್ನು ಕೋರ್ಟ್‌ಗೆ ಹಾಜರುಪಡಿಸಲಾಯಿತು. ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶಿಸಿದ ನಂತರ ಆತನನ್ನು ಫರಿದಾಬಾದ್ ಜಿಲ್ಲೆಯ ನೀಮ್ಕಾ ಜೈಲಿಗೆ ಕಳುಹಿಸಲಾಯಿತು’ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಎಎಸ್ಪಿ ಉಷಾ ಕುಂಡು ಅವರ ದೂರಿನನ್ವಯ ನೂಹ್‌ನ ಸದರ್ ಪೊಲೀಸ್ ಠಾಣೆಯಲ್ಲಿ ಬಿಟ್ಟು ವಿರುದ್ಧ ಹೊಸದಾಗಿ ಎಫ್‌ಐಆರ್ ದಾಖಲಿಸಿದ ನಂತರ, ಆತನನ್ನು ಫರಿದಾಬಾದ್‌ನಲ್ಲಿ ಪೊಲೀಸರು ಮಂಗಳವಾರ ಬಂಧಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.