ಗುರುಗ್ರಾಮ: ನುಹ್ ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಎನ್‌ಕೌಂಟರ್ ನಡೆಸಿ ಬಂಧಿಸಿರುವ ಆರೋಪಿಯನ್ನು ಅಮೀರ್ ಎಂದು ಗುರುತಿಸಲಾಗಿದೆ.

ಅರಾವಳಿ ಬೆಟ್ಟಗಳ ತಪ್ಪಲಿನಲ್ಲಿರುವ ತೌರು ಪ್ರದೇಶದಲ್ಲಿ ಅಮೀರ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಪೊಲೀಸರು ಅಮೀರ್ ಹಾಗೂ ಆತನ ಸಹಚರರು ಅಡಗಿದ್ದ ಸ್ಥಳದ ಮೇಲೆ ಮಂಗಳವಾರ ಬೆಳಗ್ಗೆ ದಾಳಿ ಮಾಡಿದ್ದರು. ಈ ವೇಳೆ ಅಮೀರ್ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದ. ಪೊಲೀಸರು ಅಮೀರ್ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ.

ಅಮೀರ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಜುಲೈ 31 ರಂದು ವಿಶ್ವ ಹಿಂದೂ ಪರಿಷತ್ತಿನ ಮೆರವಣಿಗೆ ವೇಳೆ ಆರಂಭವಾದ ಕೋಮುಗಲಭೆ ತೀವ್ರ ಹಿಂಸಾಚಾರ ರೂಪಕ್ಕೆ ತಿರುಗಿತ್ತು. ಇದು ಪಕ್ಕದ ಗುರುಗ್ರಾಮ ಜಿಲ್ಲೆಗೂ ವ್ಯಾಪಿಸಿತ್ತು. ಘಟನೆಯಲ್ಲಿ ಕನಿಷ್ಠ 6 ಮಂದಿ ಸಾವಿಗೀಡಾಗಿ, 70ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.