ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉನ್ನಾವೊ ಆಸ್ಪತ್ರೆಯಲ್ಲಿ ಶವವಾಗಿ ಪತ್ತೆಯಾದ ನರ್ಸ್‌: ಅತ್ಯಾಚಾರ ಆರೋಪ

ಅಕ್ಷರ ಗಾತ್ರ

ಉನ್ನಾವೊ(ಉತ್ತರ ಪ್ರದೇಶ): ಇಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಶನಿವಾರ ಬೆಳಿಗ್ಗೆ ಪತ್ತೆಯಾಗಿದೆ.

ಯುವತಿಯು ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ ಆಗಿ ಕೆಲಸಕ್ಕೆ ಸೇರಿದ ಮೊದಲ ದಿನವೇ ಶವವಾಗಿ ಪತ್ತೆಯಾಗಿರುವುದು ಹಲವು ಶಂಕೆಗಳಿಗೆ ಎಡೆಮಾಡಿಕೊಟ್ಟಿದೆ.

ಯುವತಿಯ ಮೇಲೆ ಅತ್ಯಾಚಾರ ಎಸಗಿ, ನಂತರ ಕೊಲೆ ಮಾಡಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನರ್ಸಿಂಗ್ ಹೋಂನ ನಿರ್ವಾಹಕ ಸೇರಿ ಮೂವರನ್ನು ಆರೋಪಿಗಳೆಂದು ಹೆಸರಿಸಲಾಗಿದೆ. ಪ್ರಥಮ ಮಾಹಿತಿ ಆಧರಿಸಿ ಈ ಮೂವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

'ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಉನ್ನಾವೊ ಹೆಚ್ಚುವರಿ ಎಸ್ಪಿ ಶಶಿ ಶೇಖರ್ ಸಿಂಗ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT