ತಿರುವನಂತಪುರ: ಕೋಟಯಂನ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ಅಮಾನವೀಯವಾಗಿ ರ್ಯಾಗಿಂಗ್ ಮಾಡಿದ್ದ ಐವರು ವಿದ್ಯಾರ್ಥಿಗಳನ್ನು ಸಂಸ್ಥೆಯಿಂದ ವಜಾಗೊಳಿಸಲಾಗುವುದು ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಸೋಮವಾರ ತಿಳಿಸಿದ್ದಾರೆ.

ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಈ ಘಟನೆಯ ಕುರಿತು ಮಾತನಾಡಿದ ಅವರು, ‘ಇದು ಕೇರಳ ಸಮಾಜದ ಆತ್ಮಸಾಕ್ಷಿಗೆ ಆಘಾತ ತಂದಿದೆ’ ಎಂದು ಹೇಳಿದರು.

‘ಈಗಾಗಲೇ ಐವರು ವಿದ್ಯಾರ್ಥಿಗಳು ಅಮಾನತುಗೊಂಡಿದ್ದಾರೆ ಮತ್ತು ಅವರನ್ನು ಕಾಲೇಜಿನಿಂದ ವಜಾಗೊಳಿಸಲು ಆದೇಶ ಹೊರಡಿಸಲಾಗಿದ್ದು, ಈ ಸಂಬಂಧ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸಲಾಗುವುದು’ ಎಂದು ಅವರು ತಿಳಿಸಿದರು.

ಈ ಘಟನೆಯಲ್ಲಿ ಕಾಲೇಜಿನ ಆಡಳಿತ ಮಂಡಳಿಯಿಂದ ಗಂಭೀರ ಲೋಪವಾಗಿದೆ ಎಂದು ಒಪ್ಪಿಕೊಂಡ ಅವರು, ‘ಕಾಲೇಜಿನ ಪ್ರಾಂಶುಪಾಲರು ಮತ್ತು ಉಸ್ತುವಾರಿ ಸಹಾಯಕ ವಾರ್ಡನ್ ಅವರನ್ನೂ ಅಮಾನತುಗೊಳಿಸಲಾಗಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.