ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರಕ್ಕೆ ಭಾರತ ಜೋಡೊ ನ್ಯಾಯ ಯಾತ್ರೆ: ನಿತೀಶ್‌, ಲಾಲುಗೆ ಆಹ್ವಾನ

Published 22 ಜನವರಿ 2024, 15:17 IST
Last Updated 22 ಜನವರಿ 2024, 15:17 IST
ಅಕ್ಷರ ಗಾತ್ರ

ಪಟ್ನಾ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹಮ್ಮಿಕೊಂಡಿರುವ ‘ಭಾರತ್ ಜೋಡೊ ನ್ಯಾಯಯಾತ್ರೆ’ಯು ಜ. 29ರಂದು ಬಿಹಾರ ಪ್ರವೇಶಿಸಲಿದ್ದು, ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಮೂರು ದಿನ ಸಂಚರಿಸಲಿದೆ. 

ನ್ಯಾಯಯಾತ್ರೆಯ ಸಾರ್ವಜನಿಕ ಸಮಾರಂಭಗಳಲ್ಲಿ ಭಾಗಿಯಾಗಿ ಎಂದು ಬಿಹಾರದ ಕಾಂಗ್ರೆಸ್‌ ಘಟಕವು, ‘ಇಂಡಿಯಾ’ ಮೈತ್ರಿಕೂಟದ ಪಾಲುದಾರ ಪಕ್ಷಗಳಿಗೆ ಸೋಮವಾರ ಆಹ್ವಾನ ನೀಡಿದೆ.

‘ಪಶ್ಚಿಮ ಬಂಗಾಳದ ಸಿಲಿಗುರಿಯಿಂದ ಕಿಶನ್‌ಗಂಜ್‌ ಜಿಲ್ಲೆ ಮೂಲಕ ರಾಹುಲ್‌ ಗಾಂಧಿ ಬಿಹಾರ ಪ್ರವೇಶಿಸಲಿದ್ದಾರೆ. ಸಾರ್ವಜನಿಕರೊಂದಿಗೆ ಸಂವಹನ ನಡೆಸಿದ ನಂತರ ವಾಸ್ತವ್ಯ ಹೂಡಲಿದ್ದಾರೆ. ಮರುದಿನ ಪೂರ್ನಿಯಾದಲ್ಲಿ ಬೃಹತ್ ರ‍್ಯಾಲಿ ನಡೆಯಲಿದ್ದು, ಇದರಲ್ಲಿ ಭಾಗಿಯಾಗುವಂತೆ ಮುಖ್ಯಮಂತ್ರಿ ನಿತೀಶ್‌ ಕುಮಾರ್‌, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಸೇರಿದಂತೆ ’ಇಂಡಿಯಾ‘ ಮೈತ್ರಿಕೂಟದ ಪಕ್ಷಗಳ ಮುಖಂಡರನ್ನು ಆಹ್ವಾನಿಸಿದ್ದೇವೆ’ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಪ್ರೇಮ್‌ ಚಂದ್ರ ಮಿಶ್ರಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಬಿಜೆಪಿಯ ಆಡಳಿತವಿರುವ ರಾಜ್ಯಗಳಲ್ಲಿ ಯಾತ್ರೆ ಸಂಚರಿಸುವಾಗ ಅಲ್ಲಿನ ಸರ್ಕಾರಗಳು ಅಡ್ಡಿಪಡಿಸಿವೆ. ಇದನ್ನು ವಿರೋಧಿಸಿ ಪಟ್ನಾದಲ್ಲಿ ಕಪ್ಪು ಬ್ಯಾಡ್ಜ್‌ ಧರಿಸಿ ಮೆರವಣಿಗೆ ನಡೆಸಲಿದ್ದೇವೆ’ ಎಂದು ಮಿಶ್ರಾ ಇದೇ ವೇಳೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT