ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪುಣೆ | ಮರಾಠ ಪ್ರತಿಭಟನಾಕಾರರಿಂದ ಒಬಿಸಿ ಕಾರ್ಯಕರ್ತನ ಮೇಲೆ ಹಲ್ಲೆ: ಪ್ರಕರಣ ದಾಖಲು

Published : 1 ಅಕ್ಟೋಬರ್ 2024, 9:27 IST
Last Updated : 1 ಅಕ್ಟೋಬರ್ 2024, 9:27 IST
ಫಾಲೋ ಮಾಡಿ
Comments

ಪುಣೆ: ಒಬಿಸಿ ಕಾರ್ಯಕರ್ತನ ಮೇಲೆ ಮರಾಠ ಸಮುದಾಯದ ಸದಸ್ಯರು ಹಲ್ಲೆ ನಡೆಸಿದ್ದು, ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಪುಣೆ ಜಿಲ್ಲೆಯ ಕೊಂಧ್ವಾ ಬಳಿ ಸೋಮವಾರ ರಾತ್ರಿ ಈ ಘಟನೆ ಸಂಭವಿಸಿದೆ. ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಘಟನೆಗೆ ಸಂಬಂಧಿಸಿದಂತೆ ಮರಾಠ ಸಮುದಾಯದ 25 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

‘ಒಬಿಸಿ ಕಾರ್ಯಕರ್ತ ಲಕ್ಷಣ ಹಕೆ ಎಂಬುವವರ ಮೇಲೆ ಹಲ್ಲೆ ನಡೆಸಿದ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ 25 ಜನರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಘಟನೆ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ’ ಎಂದು ಕುಂಧ್ವಾ ಪೊಲೀಸ್‌ ಠಾಣೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಒಬಿಸಿ ಕಾರ್ಯಕರ್ತ ಕುಡಿದು ಸಮುದಾಯದ ಕೆಲವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾನೆ ಎಂದು ಆರೋಪಿಸಿ ಮರಾಠ ಸಮುದಾಯದ ಜನರು ಹಕೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ದೃಶ್ಯಗಳು ವಿಡಿಯೊದಲ್ಲಿ ಸೆರೆಯಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT