ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಕ್ಷೇಪಾರ್ಹ ಪದ ಪ್ರಕರಣದ ವಿಚಾರಣೆ: ಬಿಧೂಢಿ ಗೈರು

Published 10 ಅಕ್ಟೋಬರ್ 2023, 15:33 IST
Last Updated 10 ಅಕ್ಟೋಬರ್ 2023, 15:33 IST
ಅಕ್ಷರ ಗಾತ್ರ

ನವದೆಹಲಿ: ಆಕ್ಷೇಪಾರ್ಹವಾದ ಹೇಳಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಮಂಗಳವಾರ ನಿಗದಿಯಾಗಿದ್ದ ಲೋಕಸಭೆಯ ಹಕ್ಕುಬಾಧ್ಯತಾ ಸಮಿತಿ ಸಭೆಗೆ ಬಿಜೆಪಿ ಸಂಸದ ರಮೇಶ್ ಬಿಧೂಢಿ ಗೈರುಹಾಜರಾದರು. 

ಬಿಎಸ್‌ಪಿ ಸಂಸದ ಡ್ಯಾನಿಶ್‌ ಅಲಿ ಅವರ ವಿರುದ್ಧ ಸದನದಲ್ಲಿಯೇ ಆಕ್ಷೇಪಾರ್ಹವಾದ ಪದವನ್ನು ಬಳಸಿರುವ ಆರೋಪ ಇವರ ಮೇಲಿದೆ. ಈ ಪ್ರಕರಣದ ವಿಚಾರಣೆಯನ್ನು ಸ್ಪೀಕರ್ ಅವರು ಹಕ್ಕುಬಾಧ್ಯತಾ ಸಮಿತಿಗೆ ಒಪ್ಪಿಸಿದ್ದಾರೆ.

ಪೂರ್ವನಿಗದಿತ ಕಾರ್ಯಕ್ರಮಗಳಿಂದಾಗಿ ಬರಲಾಗುತ್ತಿಲ್ಲ ಎಂದು ಬಿಧೂಢಿ ಕಾರಣ ನೀಡಿದ್ದಾರೆ. ಬಿಧೂಡಿ ಅವರು ಸದ್ಯ ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ತೊಂಕ್‌ ಜಿಲ್ಲೆಯ ಉಸ್ತುವಾರಿಯಾಗಿ ಅವರನ್ನು ಬಿಜೆಪಿ ನೇಮಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT