ನವದೆಹಲಿ: ಒಡಿಶಾ ವಿಧಾನಸಭೆಯ 147 ವಿಧಾನಸಭಾ ಕ್ಷೇತ್ರಗಳ ಪೈಕಿ 112 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

ಒಡಿಶಾದಲ್ಲಿ ಲೋಕಸಭೆ ಚುನಾವಣೆ ಮತ್ತು ವಿಧಾನಸಭೆ ಚುನಾವಣೆ ಏಕಕಾಲದಲ್ಲಿ ನಡೆಯಲಿದೆ.

22 ಹಾಲಿ ಶಾಸಕರ ಪೈಕಿ 21 ಶಾಸಕರನ್ನು ಮತ್ತೆ ಕಣಕ್ಕಿಳಿಸಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮನಮೋಹನ್ ಸಮಾಲ್ ಚಂದಾಬಲಿಯಿಂದ ಸ್ಪರ್ಧಿಸಲಿದ್ದು, ಸಂಸದ ಸುರೇಶ್ ಪೂಜಾರಿ ಅವರು ಬ್ರರಾಜರಾಜನಗರದಿಂದ ಸ್ಪರ್ಧಿಸಲಿದ್ದಾರೆ.

ಮುಖ್ಯಮಂತ್ರಿ ನವೀನ್ ಪಟ್ನಾಯಕ್ ನೇತೃತ್ವದ ಬಿಜು ಜನತಾ ದಳ(ಬಿಜೆಡಿ) 24 ವರ್ಷಗಳಿಂದ ರಾಜ್ಯದ ಚುಕ್ಕಾಣಿ ಹಿಡಿದಿದೆ. ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಬಿಜೆಡಿ ನಡುವೆ ಮೈತ್ರಿ ಮಾತುಕತೆ ನಡೆದಿದ್ದು, ವಿಫಲವಾಗಿತ್ತು. ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಬಿಜೆಪಿ ಘೋಷಿಸಿತ್ತು.

ಈ ಬಾರಿ ಬಿಜೆಡಿ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ನಡೆಯಲಿದೆ.

2019ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಡಿ ಮತ್ತು ಬಿಜೆಪಿ ಕ್ರಮವಾಗಿ 112 ಮತ್ತು 22 ಸ್ಥಾನಗಳನ್ನು ಗೆದ್ದಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.