ಭುವನೇಶ್ವರ: ಪಶ್ಚಿಮ ಬಂಗಾಳದ ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ತಂದೆಯೊಂದಿಗೆ ಒಡಿಶಾದ ಮುಖ್ಯಮಂತ್ರಿ ಮೋಹನ್ ಚರಣ್ ಮಾಂಝಿ ಅವರು ದೂರವಾಣಿ ಕರೆಯ ಮೂಲಕ ಮಾತನಾಡಿದ್ದಾರೆ.

ಸಂತ್ರಸ್ತೆಯ ತಂದೆಗೆ ರಾಜ್ಯ ಸರ್ಕಾರದ ವತಿಯಿಂದ ಸಂಪೂರ್ಣ ನೆರವಿನ ಭರವಸೆ ನೀಡಿದ್ದಾರೆ.

‘ನಿಮ್ಮ ಮಗಳಿಗಾದ ಘಟನೆಯನ್ನು ಕೇಳಿ ತೀವ್ರ ದುಃಖವಾಗಿದೆ. ನಿಮ್ಮ ಮಾನಸಿಕ ಪರಿಸ್ಥಿತಿ ಅರ್ಥವಾಗುತ್ತದೆ. ನಿಮ್ಮೊಂದಿಗೆ ರಾಜ್ಯ ಸರ್ಕಾರವಿದೆ, ನಿಮಗೆ ಸಂಪೂರ್ಣ ನೆರವು ನೀಡುತ್ತೇವೆ’ ಎಂದು ಮಾಂಝಿ ಅವರು ಸಂತ್ರಸ್ತೆಯ ತಂದೆಗೆ ಆಶ್ವಾಸನೆ ನೀಡಿದ್ದಾರೆ.

ಒಡಿಶಾದ ಹಿರಿಯ ಅಧಿಕಾರಿಯೊಬ್ಬರು ಪಶ್ಚಿಮ ಬಂಗಾಳ ಸರ್ಕಾರದ ಜತೆ ನಿಕಟ ಸಂಪರ್ಕದಲ್ಲಿದ್ದಾರೆ. ಅವರು ಎಲ್ಲಾ ರೀತಿಯ ಕಾನೂನು ನೆರವು ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಸಂತ್ರಸ್ತೆಯು ಬೇಗನೇ ಗುಣಮುಖವಾಗಿ, ಮೊದಲಿನಂತೆ ಸಹಜ ಜೀವನ ನಡೆಸಲಿ ಎಂದು ಮಾಂಝಿ ಆಶಿಸಿದ್ದಾರೆ.

ಶುಕ್ರವಾರ ರಾತ್ರಿ ಒಡಿಶಾದ ಬಾಲಸೋರ್ ಜಿಲ್ಲೆಯ ಜಲೇಶ್ವರ ಮೂಲದ ಎರಡನೇ ವರ್ಷದ ವೈದ್ಯ ವಿದ್ಯಾರ್ಥಿನಿಯನ್ನು ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಅರಣ್ಯ ಪ್ರದೇಶಕ್ಕೆ ಹೊತ್ತುಕೊಂಡು ಹೋಗಿ ಅತ್ಯಾಚಾರ ಎಸಲಾಗಿತ್ತು.

ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
.ಪ.ಬಂಗಾಳ | ವೈದ್ಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರ ಬಂಧನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.