ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಡಿಶಾ: ಪೋಸ್ಟರ್‌ ಅಳವಡಿಸಿ ಕಾಂಗ್ರೆಸ್‌ ಶಾಸಕನಿಗೆ ಜೀವ ಬೆದರಿಕೆ

Published 19 ಫೆಬ್ರುವರಿ 2024, 7:34 IST
Last Updated 19 ಫೆಬ್ರುವರಿ 2024, 7:34 IST
ಅಕ್ಷರ ಗಾತ್ರ

ಭುವನೇಶ್ವರ: ಒಡಿಶಾದ ಬೋಲಂಗಿರ್ ಜಿಲ್ಲೆಯ ಕಾಂತಾಬಾಂಜಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಂತೋಷ್ ಸಿಂಗ್ ಸಲೂಜಾ ಅವರನ್ನು 15 ದಿನಗಳಲ್ಲಿ ಕೊಲ್ಲಲಾಗುವುದು ಎಂದು ಬ್ಯಾನರ್‌ ಅಳವಡಿಸಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಪೋಸ್ಟರ್‌ಗಳನ್ನು ವಶಪಡಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಶಾಸಕ ಸಲೂಜಾ, 'ರಾಜಕೀಯ ಕಾರಣಗಳಿಗಾಗಿ ಜೀವ ಬೆದರಿಕೆ ಹಾಕಲಾಗಿದೆ. ಕೆಲವು ಮಾಧ್ಯಮಗಳಿಂದ ಘಟನೆಯ ಬಗ್ಗೆ ನನಗೆ ತಿಳಿದು ಬಂದಿದೆ. ಚುನಾವಣೆ ಸಮೀಪಿಸುತ್ತಿರುವಂತೆ ನನ್ನ ಕ್ಷೇತ್ರದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದೇನೆ, ಈ ಸಮಯದಲ್ಲಿ ಯಾರೋ ಪೋಸ್ಟರ್ ಹಾಕುವ ಮೂಲಕ ನನ್ನನ್ನು ಕೊಲ್ಲುವುದಾಗಿ ನೇರವಾಗಿ ಸವಾಲು ಹಾಕುತ್ತಿದ್ದಾರೆ. ಇದು ಆಘಾತಕಾರಿಯಾಗಿದೆ’ ಎಂದಿದ್ದಾರೆ.

‘ನನ್ನ ಕ್ಷೇತ್ರದ ಅಭಿವೃದ್ಧಿಗಾಗಿ ನಾನು ಸಾಯಲು ಹೆದರುವುದಿಲ್ಲ. ಜೀವ ಬೆದರಿಕೆ ಹಾಕಿರುವ ವ್ಯಕ್ತಿಯನ್ನು ಕೂಡಲೇ ಬಂಧಿಸಬೇಕು’ ಎಂದು ಕಾಂಗ್ರೆಸ್ ಮುಖಂಡರು ಪೊಲೀಸರನ್ನು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT