ಭುವನೇಶ್ವರ: ಉದ್ಯಮಿಯಿಂದ ₹10 ಲಕ್ಷ ಲಂಚ ಪಡೆಯುತ್ತಿದ್ದ ಐಎಎಸ್ ಅಧಿಕಾರಿಯನ್ನು ಒಡಿಶಾ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಸೋಮವಾರ ಬಂಧಿಸಿದೆ.

ಕಾಲಹಂದಿ ಜಿಲ್ಲೆಯ ಧರ್ಮಗಢದ ಉಪ ವಿಭಾಗಾಧಿಕಾರಿ ಧಿಮನ್ ಚಕ್ಮಾ ಅವರು ಸ್ಥಳೀಯ ಉದ್ಯಮಿಯೊಬ್ಬರಿಂದ ₹20 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ತಮ್ಮ ಮನೆಯಲ್ಲಿ ಮುಂಗಡವಾಗಿ ₹10 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಅಧಿಕಾರಿ ಸಿಕ್ಕಿಬಿದ್ದಿದ್ದಾರೆ.

ಉದ್ಯಮಿ ನೀಡಿದ ದೂರಿನ ಆಧಾರದ ಮೇಲೆ ಚಕ್ಮಾ ಅವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಎಫ್ಐಆರ್ ದಾಖಲಿಸಿ, ಕಾರ್ಯಾಚರಣೆ ನಡೆಸಲಾಗಿದೆ. ಮನೆಯಲ್ಲಿ ಶೋಧ ನಡೆಸಿದ್ದು, ಅಲ್ಲಿ ಪತ್ತೆಯಾದ ₹47 ಲಕ್ಷ ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸಿಬಿ ಪ್ರಕಟಣೆಯಲ್ಲಿ ತಿಳಿಸಿದೆ.

2021ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.