ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿ ಮೇಲೆ ಅತ್ಯಾಚಾರ: ವ್ಯಕ್ತಿಗೆ 20 ವರ್ಷ ಜೈಲು ಶಿಕ್ಷೆ

Published 14 ಮಾರ್ಚ್ 2024, 16:35 IST
Last Updated 14 ಮಾರ್ಚ್ 2024, 16:35 IST
ಅಕ್ಷರ ಗಾತ್ರ

ಬಾರೀಪದಾ(ಒಡಿಶಾ): ಏಳು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ವ್ಯಕ್ತಿಗೆ ಮಯೂರ್‌ಭಂಜ್ ಜಿಲ್ಲಾ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿದೆ.

ದಂಡ ಪಾವತಿಸಲು ವಿಫಲನಾದಲ್ಲಿ, ಮತ್ತೆ ಮೂರು ತಿಂಗಳು ಸೆರೆವಾಸ ಅನುಭವಿಸಬೇಕು ಎಂದು ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್‌ಕುಮಾರ್ ನಾಯಕ್ ಆದೇಶಿಸಿದ್ದಾರೆ.

2021ರಲ್ಲಿ ಬೈಸಿಂಗ ಪೊಲೀಸ್‌ ಠಾಣೆಯಲ್ಲಿ ಈ ಘಟನೆ ನಡೆದಿತ್ತು. ಬಾಲಕಿಯು ಮನೆಗೆಲಸಕ್ಕೆ ತೆರಳಿದ್ದಾಗ 30 ವರ್ಷದ ವ್ಯಕ್ತಿ ಆಕೆ ಮೇಲೆ ಅತ್ಯಾಚಾರ ಎಸಗಿದ್ದ.

ಈ ಕುರಿತು, ಬಾಲಕಿ ತಂದೆ ಪೋಕ್ಸೊ ಕಾಯ್ದೆಯಡಿ ದೂರು ದಾಖಲಿಸಿದ್ದರು. ಸಂತ್ರಸ್ತ ಬಾಲಕಿಯ ಹೇಳಿಕೆ, 16 ಮಂದಿ ಸಾಕ್ಷಿಗಳ ಹೇಳಿಕೆ ಹಾಗೂ ವೈದ್ಯಕೀಯ ವರದಿ ಆಧರಿಸಿ ನ್ಯಾಯಾಧೀಶರು ಈ ಶಿಕ್ಷೆ ಪ್ರಕಟಿಸಿದ್ದಾರೆ.

‘ಬಾಲಕಿಗೆ ₹ 4 ಲಕ್ಷ ಪರಿಹಾರ ನೀಡುವಂತೆ ಮಯೂರ್‌ಭಂಜ್ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಿದೆ’ ಎಂದು ವಿಶೇಷ ಸರ್ಕಾರಿ ವಕೀಲ ಮನೋರಂಜನ್ ಪಟ್ನಾಯಕ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT