ಕೋಲ್ಕತ್ತ: ಪಶ್ಚಿಮ ಬಂಗಾಳದ ಪಶ್ಚಿಮ ಬರ್ಧಮಾನ್ ಜಿಲ್ಲೆಯಲ್ಲಿ ಒಡಿಶಾ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅಪರಿಚಿತ ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ಎರಡನೇ ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ತನ್ನ ಸ್ನೇಹಿತರೊಬ್ಬರೊಂದಿಗೆ ಹೊರಗೆ ಊಟಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ ಎಂದು ಆಕೆಯ ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಒಡಿಶಾದ ಜಲೇಶ್ವರದ ವೈದ್ಯಕೀಯ ವಿದ್ಯಾರ್ಥಿನಿ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ವೈದ್ಯಕೀಯ ವಿದ್ಯಾರ್ಥಿನಿಯ ಕುಟುಂಬ ಸದಸ್ಯರು ನೀಡಿದ ದೂರಿನ ಆಧಾರದ ಮೇಲೆ ನಾವು ತನಿಖೆಯನ್ನು ಪ್ರಾರಂಭಿಸಿದ್ದೇವೆ’ಎಂದು ಅವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ವಿದ್ಯಾರ್ಥಿನಿಯ ಪೋಷಕರು, ತಮ್ಮ ಮಗಳ ಸ್ನೇಹಿತರಿಂದ ಕರೆ ಬಂದ ನಂತರ ಇಂದು ಬೆಳಿಗ್ಗೆ ದುರ್ಗಾಪುರ ತಲುಪಿದ್ದೇವೆ ಎಂದು ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ 10ಗಂಟೆ ಸುಮಾರಿಗೆ ತನ್ನ ಮಗಳು ಸ್ನೇಹಿತೆಯೊಬ್ಬಳೊಂದಿಗೆ ಭೋಜನಕ್ಕೆ ಕಾಲೇಜು ಆವರಣದಿಂದ ಹೊರಗೆ ಹೋದಾಗ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ತಾಯಿ ಆರೋಪಿಸಿದ್ದಾರೆ.

‘ನಮಗೆ ಅವಳ ಸ್ನೇಹಿತೆ ಕರೆ ಮಾಡಿ ಮಾಹಿತಿ ನೀಡಿದರು. ನಾವು ಇಂದು ಬೆಳಿಗ್ಗೆ ಇಲ್ಲಿಗೆ ಬಂದು ಪೊಲೀಸರಿಗೆ ದೂರು ನೀಡಿದ್ದೇವೆ. ಕಾಲೇಜು ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಿದೆ ಎಂದು ನಾನು ಕೇಳಿದ್ದೇನೆ. ಅದಕ್ಕಾಗಿಯೇ ನಾವು ನಮ್ಮ ಮಗಳನ್ನು ಇಲ್ಲಿ ವೈದ್ಯಕೀಯ ವಿದ್ಯಾಭ್ಯಾಸಕ್ಕೆ ಕಳುಹಿಸಿದ್ದೇವೆ’ಎಂದು ವಿದ್ಯಾರ್ಥಿನಿಯ ತಂದೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.