ಭುವನೇಶ್ವರ: ಒಡಿಶಾದ ಕೇಂದ್ರಪಾರ ಜಿಲ್ಲೆಯಲ್ಲಿ ಗೆಳೆಯನಿಂದ ಬೆದರಿಕೆಗೆ ಒಳಗಾಗಿ ಕಾಲೇಜು ವಿದ್ಯಾರ್ಥಿನಿಯೊಬ್ಬರು ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜುಲೈ 12ರಿಂದ ಈಚೆಗೆ ಒಡಿಶಾದಲ್ಲಿ ವಿದ್ಯಾರ್ಥಿನಿಯರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ 3ನೇ ಪ್ರಕರಣ ಇದಾಗಿದೆ.

‘ಪಟ್ಟಮುಂಡೈ (ಗ್ರಾಮೀಣ) ಪೊಲೀಸ್ ಠಾಣೆ ವ್ಯಾಪ್ತಿಯ ಕಥಿಯಾಪಾದ ಗ್ರಾಮದಲ್ಲಿ ಹೊಸ ಪ್ರಕರಣ ವರದಿಯಾಗಿದೆ. 20 ವರ್ಷದ ಕಾಲೇಜು ವಿದ್ಯಾರ್ಥಿನಿ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪೊಲೀಸರು ಹೇಳಿದ್ದಾರೆ.

‘ಮೃತ ವಿದ್ಯಾರ್ಥಿನಿ ಗೆಳೆಯನೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದಳು. ಆತನಿಂದ ಬೆದರಿಗೆ ಒಳಗಾಗಿ ಆಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ’ ಎಂದು ಕೇಂದ್ರಪಾರ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಕಟಾರಿಯಾ ಮಾಹಿತಿ ನೀಡಿದ್ದಾರೆ.

ಆರೋಪಿ ಕಿರುಕುಳ ನೀಡುತ್ತಿರುವ ಬಗ್ಗೆ ನನ್ನ ಮಗಳು ಆರು ತಿಂಗಳ ಹಿಂದೆ ದೂರು ನೀಡಿದ್ದಳು. ಆದರೆ, ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಸಂತ್ರಸ್ತೆಯ ತಂದೆ ಆರೋಪಿಸಿದ್ದಾರೆ.

ಜುಲೈ 12ರಂದು ಇಂಗ್ಲಿಷ್ ಪ್ರಾಧ್ಯಾಪಕರೊಬ್ಬರು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದ ಬಾಲೇಶ್ವರದ ಫಾಕಿರ್ ಮೋಹನ್ (ಸ್ವಾಯತ್ತ) ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ನ್ಯಾಯ ಸಿಗದೆ ಕಾಲೇಜು ಆವರಣದಲ್ಲಿಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು.

ವಿದ್ಯಾರ್ಥಿನಿಯ ಸಾವಿಗೆ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಶೇಕಡ 95ರಷ್ಟು ಸುಟ್ಟ ಗಾಯಗಳಾಗಿದ್ದ ವಿದ್ಯಾರ್ಥಿನಿಯು ಮೂರು ದಿನ ಸಾವು ಬದುಕಿನ ನಡುವೆ ಹೋರಾಡಿ ಕೊನೆಯುಸಿರೆಳೆದಿದ್ದರು.

ಆಗಸ್ಟ್ 2ರಂದು ಒಡಿಶಾದ ಪುರಿಯಲ್ಲಿ ಮೂವರು ದುಷ್ಕರ್ಮಿಗಳು 15 ವರ್ಷದ ಬಾಲಕಿಗೆ ಬೆಂಕಿ ಹಚ್ಚಿದ್ದರು. ಬಾಲಕಿಗೆ ಶೇ 75ರಷ್ಟು ಸುಟ್ಟಗಾಯಗಳಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸಿದರೂ ಬದುಕುಳಿಯಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.