ಗುರುವಾರ, 28 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Live - Odisha Train Tragedy | ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ– ಪ್ರಧಾನಿ ಮೋದಿ

ದುರಂತದ ಕ್ಷಣ ಕ್ಷಣ ಅಪ್ಡೇಟ್ಸ್
Published 3 ಜೂನ್ 2023, 5:13 IST
Last Updated 3 ಜೂನ್ 2023, 14:26 IST
ಅಕ್ಷರ ಗಾತ್ರ
05:0903 Jun 2023

ಬಾಲಸೋರ್‌ಗೆ ಭೇಟಿ ನೀಡಲಿರುವ ಮಮತಾ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪಕ್ಕದ ಒಡಿಶಾದ ಬಾಲಸೋರ್‌ಗೆ ಭೇಟಿ ನೀಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈಗಾಗಲೇ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.

ಆಂಧ್ರದಿಂದ ಉನ್ನತ ಮಟ್ಟದ ಸಮಿತಿ

ಒಡಿಶಾ ತ್ರಿವಳಿ ರೈಲು ಅಪಘಾತ ಸ್ಥಳದಲ್ಲಿನ ಪರಿಹಾರ ಕಾರ್ಯಕ್ಕಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್‌ ಮೋಹನ ರೆಡ್ಡಿ ಅವರು ಐಟಿ ಸಚಿವ ಜಿ.ಅಮರನಾಥ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದ್ದಾರೆ.

ನಾಗರಿಕ ಸರಬರಾಜು ಇಲಾಖೆ ಆಯುಕ್ತ ಅರುಣ್ ಕುಮಾರ್ ನೇತೃತ್ವದ ಐಎಎಸ್ ಅಧಿಕಾರಿಗಳ ತಂಡ ಈಗಾಗಲೇ ಒಡಿಶಾಗೆ ತೆರಳಿದೆ

ಒಡಿಶಾ ರೈಲು ದುರಂತ ಮುಂದುವರಿದ ಕಾರ್ಯಾಚರಣೆ 

ಬೆಂಗಳೂರು–ಹೌರಾ ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್‌, ಕೋರಮಂಡಲ್‌ ಎಕ್ಸ್‌ಪ್ರೆಸ್‌ ಮತ್ತು ಸರಕು ಸಾಗಣೆ ರೈಲುಗಳ ಮಧ್ಯೆ ಒಡಿಶಾದ ಬಾಲಸೋರ್‌ನಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಅವಘಡದಲ್ಲಿ ಕನಿಷ್ಠ 233 ಮಂದಿ ಮೃತಪಟ್ಟು, 900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರೈಲಿನ ಅವಶೇಷಗಳಡಿ ಸಿಲುಕಿರುವವರ ರಕ್ಷಣೆಗಾಗಿ ಕಾರ್ಯಾಚರಣೆ ಭರದಿಂದ ಸಾಗಿದೆ. ಆಂಧ್ರ, ತಮಿಳುನಾಡು, ಪಶ್ಚಿಮ ಬಂಗಾಳ ರಾಜ್ಯಗಳು ರಕ್ಷಣಾ ತಂಡಗಳನ್ನು ಸ್ಥಳಕ್ಕೆ ರವಾನಿಸಿವೆ.

05:5603 Jun 2023

ಪ್ರಧಾನಿಯಿಂದ ಉನ್ನತ ಮಟ್ಟದ ಸಭೆ

ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೊ ಸಂತಾಪ

ಒಡಿಶಾ ರೈಲು ದುರಂತದ ಹಿನ್ನೆಲೆಯಲ್ಲಿ ಮುಂಬೈ ಗೋವಾ ವಂದೇ ಭಾರತ್‌ ರೈಲು ಉದ್ಘಾಟನೆಯನ್ನು ರದ್ದುಗೊಳಿಸಲಾಗಿದೆ.

ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಸಚಿವ ಸಂತೋಷ್ ಲಾಡ್ ನಿಯೋಜನೆ

ಬೆಂಗಳೂರು: ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಸಚಿವ ಸಂತೋಷ್ ಲಾಡ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿಯೋಜಿಸಿದ್ದಾರೆ.

ಘಟನೆ ಕುರಿತಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಂದ ವರದಿ ಕೇಳಿದ ಬಳಿಕ ಸಂಬಂಧಪಟ್ಟ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಬಳಿಕ ತಕ್ಷಣ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಹಾಗೂ ಅಗತ್ಯ ನೆರವನ್ನು ಒದಗಿಸಲು ಸೂಚನೆ ನೀಡಿದ್ದಾರೆ.

ಸಂತೋಷ್ ಲಾಡ್ ಅವರ ಜತೆಗೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಸೇರಿ ಇತರೆ ಅಧಿಕಾರಿಗಳ ತಂಡ ಘಟನಾ ಸ್ಥಳಕ್ಕೆ ಹೊರಟಿದೆ

ಮಾರ್ಗ ಬದಲಾವಣೆ: ನೈರುತ್ಯ ರೈಲ್ವೆ ಪ್ರಕಟಣೆ

ಬಾಲೆಹೊಸೂರ್ ತ್ರಿವಳಿ ರೈಲು ಅಪಘಾತದಿಂದಾಗಿ ಈ ಮಾರ್ಗದಲ್ಲಿ ಸಂಚರಿಸುತ್ತಿರುವ ರೈಲುಗಳ ಮಾರ್ಗವನ್ನು ಬದಲಿಸಲಾಗಿದೆ ಎಂದು ನೈರುತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ. ಶುಕ್ರವಾರ (ಜೂನ್ 2) ಹೊರಟಿರುವ ನಾಲ್ಕು ರೈಲುಗಳ ಮಾರ್ಗ ಬದಲಾವಣೆಯ ಮಾಹಿತಿ ಇಲ್ಲಿದೆ.

Live - Odisha Train Tragedy | ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ– ಪ್ರಧಾನಿ ಮೋದಿ
06:5703 Jun 2023

ದುರಂತದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಭೇಟಿ ನೀಡಲಿದ್ದಾರೆ. 

07:4603 Jun 2023

ಒಡಿಶಾದ ರೈಲು ಅಪಘಾತದಲ್ಲಿ ಸಿಲುಕಿದ ಕರ್ನಾಟಕದವರನ್ನು ಸುರಕ್ಷಿತವಾಗಿ ಕರೆದುಕೊಂಡು ಬರುತ್ತೇವೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಅವರು ವಿಮಾನದ ಮೂಲಕ ಭುವನೇಶ್ವರಕ್ಕೆ ತೆರಳಿ ಅಲ್ಲಿಂದ ಕಾರಿನಲ್ಲಿ ಬಾಲಸೋರ್‌ಗೆ ತೆರಳಲಿದ್ದಾರೆ.

07:5603 Jun 2023

ಒಡಿಶಾ ರೈಲು ದುರಂತದ ವೈಮಾನಿಕ ನೋಟಗಳನ್ನು ಎಎನ್‌ಐ ಸುದ್ದಿಸಂಸ್ಥೆ ಹಂಚಿಕೊಂಡಿದೆ

08:2503 Jun 2023

ಒಡಿಶಾ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 261

09:2703 Jun 2023

ಒಡಿಶಾ ತ್ರಿವಳಿ ರೈಲು ಅಪಘಾತ ಕುರಿತು ಆಘಾತ ವ್ಯಕ್ತಪಡಿಸಿರುವ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ’ಇದು ಅತ್ಯಂತ ಆಘಾತಕಾರಿ ಘಟನೆ. ಮೃತ ವ್ಯಕ್ತಿಗಳ ಕುಟುಂಬಗಳಿಗೆ ತೀವ್ರ ಸಂತಾಪಗಳು' ಎಂದಿದ್ದಾರೆ.

09:3803 Jun 2023

ತ್ರಿವಳಿ ರೈಲು ಅಪಘಾತದಲ್ಲಿ ಬದುಕುಳಿದ ಪ್ರಯಾಣಿಕರಲ್ಲಿ 250 ಪ್ರಯಾಣಿಕರು ಚೆನ್ನೈನತ್ತ ಪ್ರಯಾಣ ಬೆಳೆಸಿದ್ದಾರೆ. ಶನಿವಾರ ರಾತ್ರಿ 9.30ಕ್ಕೆ ವಿಜಯವಾಡಕ್ಕೆ ರೈಲು ತಲುಪಲಿದೆ. ಭಾನುವಾರ ಚೆನ್ನೈ ಸೆಂಟ್ರಲ್ ತಲುಪಲಿದೆ ಎಂದು ದಕ್ಷಿಣ ರೈಲ್ವೆ ತಿಳಿಸಿದೆ.

10:3203 Jun 2023

ಅಪಘಾತದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

13:0003 Jun 2023

ಒಡಿಶಾದಲ್ಲಿ ತ್ರಿವಳಿ ರೈಲು ಅಪಘಾತ: ಮೃತರ ಸಂಖ್ಯೆ 288ಕ್ಕೆ ಏರಿಕೆ    ಮಧ್ಯಾಹ್ನ 2 ಗಂಟೆಯ ವರದಿ ಪ್ರಕಾರ, ಬಾಲಸೋರ್ ರೈಲು ದುರಂತದಲ್ಲಿ ಮೃತ ಸಂಖ್ಯೆ 288ಕ್ಕೆ ಏರಿದೆ. 803 ಮಂದಿ ಗಾಯಗೊಂಡಿದ್ದು, ಇದರಲ್ಲಿ 56 ಮಂದಿ ಸ್ಥಿತಿ ಗಂಭೀರವಾಗಿದೆ