ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಡಿಶಾ: ಪೊಲೀಸರ ಮುಂದೆ ಶರಣಾದ ಇಬ್ಬರು ಮಹಿಳಾ ನಕ್ಸಲರು

ನಿಷೇಧಿತ ಸಿಪಿಐ ಮಾವೋವಾದಿ ಸಂಘಟನೆಯ ಇಬ್ಬರು ಮಹಿಳಾ ನಕ್ಸಲರು ಪೊಲೀಸರ ಮುಂದೆ ಶರಣಾಗಿದ್ದಾರೆ.
Published 7 ಫೆಬ್ರುವರಿ 2024, 4:47 IST
Last Updated 7 ಫೆಬ್ರುವರಿ 2024, 4:47 IST
ಅಕ್ಷರ ಗಾತ್ರ

ಬಿಜಾಪುರ, ಛತ್ತೀಸಗಢ: ನಿಷೇಧಿತ ಸಿಪಿಐ ಮಾವೋವಾದಿ ಸಂಘಟನೆಯ ಇಬ್ಬರು ಮಹಿಳಾ ನಕ್ಸಲರು ಪೊಲೀಸರ ಮುಂದೆ ಶರಣಾಗಿದ್ದಾರೆ.

ಒಡಿಶಾದ ಬೌದ್ ಜಿಲ್ಲೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಪೊಲೀಸರ ಎದುರು ಇಬ್ಬರು ಮಹಿಳಾ ನಕ್ಸಲರು ಶರಣಾಗಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್‌ಐ ತಿಳಿಸಿದೆ.

ಇನ್ನೊಂದೆಡೆ ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ಗ್ರಾಮಸ್ಥನೊಬ್ಬನನ್ನು ಹತ್ಯೆ ಮಾಡಿದ್ದಾರೆ.

ಬಾಸುಗುಡಾ ಪೊಲೀಸ್ ಠಾಣೆಯ ತಿಮಾಪುರ ಎಂಬ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಮೃತನನ್ನು ಮಿಚ್ಚಾ ಹದ್ಮಾ ಎಂದು ಗುರುತಿಸಲಾಗಿದೆ.

‘ನಕ್ಸಲರು ಗ್ರಾಮದ ಹೊರವಲಯದಲ್ಲಿ ಗ್ರಾಮಸ್ಥನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸುದ್ದಿ ತಿಳಿದ ತಕ್ಷಣ ಪೊಲೀಸ್ ತಂಡ ಅಲ್ಲಿಗೆ ತೆರಳಿದೆ. ಶೋಧ ಕಾರ್ಯಾಚರಣೆ ಮುಂದುವರೆದಿದೆ’ ಎಂದು ಬಿಜಾಪುರ ಜಿಲ್ಲಾ ಪೊಲೀಸ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT