ಜೈಪುರ: ಚುರು ಜಿಲ್ಲೆಯ ಸರ್ಕಾರಿ ಅನುದಾನಿತ ಗೋಶಾಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ವಿಷಾಹಾರ ಸೇವಿಸಿ 78 ಹಸುಗಳು ಸಾವನ್ನಪ್ಪಿವೆ ಎಂದು ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಶುಕ್ರವಾರ ರಾತ್ರಿಯಿಂದ 78 ಹಸುಗಳು ಮೃತಪಟ್ಟಿದ್ದು, ಕೆಲವು ಕಾಯಿಲೆಗಳಿಂದ ಸಾವನ್ನಪ್ಪಿರುವ ಶಂಕೆ ಇದೆ ಎಂದು ಪಶು ಸಂಗೋಪನಾ ಇಲಾಖೆಯ ಜಂಟಿ ನಿರ್ದೇಶಕ ಡಾ.ಜಗದೀಶ್ ಹೇಳಿದ್ದಾರೆ.

ಗೋಶಾಲೆಗೆ ಈಗಾಗಲೇ ಹಲವು ತಂಡಗಳು ಭೇಟಿ ನೀಡಿದ್ದು, ಹಸುಗಳ ಸಾವಿನ ಬಗ್ಗೆ ತಪಾಸಣೆ ನಡೆಸಲಾಗುತ್ತಿವೆ. ಮೇವಿನ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.