ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಮನು ಭಾಕರ್ ನೀಡಿದ ಅದ್ಭುತ ಪ್ರದರ್ಶನವು ಪ್ರತಿಯೊಬ್ಬ ಭಾರತೀಯನಿಗೂ ಸ್ಫೂರ್ತಿದಾಯಕವಾಗಿದೆ ಎಂದು ಅವರ ಬಗ್ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ದೇಶಕ್ಕಾಗಿ ಎರಡು ಕಂಚಿನ ಪದಕಗಳನ್ನು ಗೆದ್ದು, ಇತಿಹಾಸ ನಿರ್ಮಿಸಿದ ಮನು ಭಾಕರ್ ಅವರ ಮುಂದಿನ ವೃತ್ತಿಜೀವನವು ಶುಭಕರವಾಗಿರಲಿ’ ಆಕೆಯ ಅದ್ಭುತ ಪ್ರದರ್ಶನವು ಪ್ರತಿಯೊಬ್ಬ ಭಾರತೀಯನಿಗೂ ಪ್ರೇರಣೆಯಾಗಿದೆ ಎಂದು ತಿಳಿಸಿದ್ದಾರೆ.
ಮನು ಭಾಕರ್ ಸಹ ರಕ್ಷಣಾ ಸಚಿವರನ್ನು ಭೇಟಿಯಾದ ಫೋಟೊಗಳನ್ನು ‘ಎಕ್ಸ್’ನಲ್ಲಿ ಹಂಚಿಕೊಂಡಿದ್ದು, ಬಿಡುವಿಲ್ಲದ ಸಮಯದ ನಡುವೆಯೂ ನಮ್ಮನ್ನು ಭೇಟಿ ಮಾಡಿ, ಸ್ಫೂರ್ತಿದಾಯಕ ಮಾತುಗಳನ್ನು ನಮ್ಮೊಂದಿಗೆ ಹಂಚಿಕೊಂಡಿದ್ದು ಸಂತೋಷವಾಗಿದೆ ಎಂದು ಬರೆದುಕೊಂಡಿದ್ದಾರೆ.
ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಗೆದ್ದ ಮೊದಲ ಭಾರತೀಯ ಅಥ್ಲೀಟ್ ಎನ್ನುವ ಹೆಗ್ಗಳಿಕೆಗೆ ಮನು ಭಾಕರ್ ಪಾತ್ರರಾಗಿದ್ದಾರೆ.
22 ವರ್ಷದ ಭಾಕರ್, ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಹಾಗೂ ಏರ್ ಪಿಸ್ತೂಲ್ ಮಿಶ್ರ ತಂಡ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.
ಶನಿವಾರ ಮತ್ತೆ ಪ್ಯಾರಿಸ್‌ಗೆ ತೆರಳಲಿರುವ ಭಾಕರ್, ಭಾನುವಾರ ನಡೆಯಲಿರುವ ಒಲಿಂಪಿಕ್ಸ್ ಸಮಾರೋಪ ಸಮಾರಂಭದಲ್ಲಿ ಭಾರತದ ಮಹಿಳಾ ಧ್ವಜಧಾರಿಯಾಗಿ ಪಾಲ್ಗೊಳ್ಳಲಿದ್ದಾರೆ.
I am honoured to have the opportunity to meet with the Hon’ble Defence Minister of India, Shri Rajnath Singh at his office in New Delhi. I am grateful he took time out from his busy schedule to offer his support and inspired me with his words of motivation. 🇮🇳 🙏✨#JeetKiAur… pic.twitter.com/g8O2gCPEoz
— Manu Bhaker🇮🇳 (@realmanubhaker) August 8, 2024
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.