ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಸ್ಕತ್‌ಗೆ ಹೊರಟಿದ್ದ ವಿಮಾನದಲ್ಲಿ ತಾಂತ್ರಿಕ ದೋಷ

ಕೋಯಿಕ್ಕೋಡ್‌ ವಿಮಾನ ನಿಲ್ದಾಣಕ್ಕೆ ವಾಪಸ್
Published 25 ಜುಲೈ 2023, 11:42 IST
Last Updated 25 ಜುಲೈ 2023, 11:42 IST
ಅಕ್ಷರ ಗಾತ್ರ

ಕೋಯಿಕ್ಕೋಡ್‌: ಮಸ್ಕತ್‌ಗೆ ತೆರಳುತ್ತಿದ್ದ ಒಮನ್‌ನ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣದಿಂದ ಕೋಯಿಕ್ಕೋಡ್‌ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಾಪಸ್‌ ಬಂದಿಳಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘169 ಪ್ರಯಾಣಿಕರಿದ್ದ ಡಬ್ಲ್ಯುವೈ 298 ವಿಮಾನವು ಮಂಗಳವಾರ ಬೆಳಿಗ್ಗೆ ಕಾರಿಪುರ ವಿಮಾನ ನಿಲ್ದಾಣದಿಂದ ಮಸ್ಕತ್‌ಗೆ ಹೊರಟಿತ್ತು. ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣದಿಂದ ಕೆಲವೇ ನಿಮಿಷಗಳಲ್ಲಿ ವಾಪಸ್ ಇದೇ ನಿಲ್ದಾಣಕ್ಕೆ ಮರಳಿ ಸುರಕ್ಷಿತವಾಗಿ ಲ್ಯಾಂಡ್‌ ಆಗಿದೆ’ ಎಂದು ತಿಳಿಸಿದ್ದಾರೆ.

ಭೂಸ್ಪರ್ಶಕ್ಕೂ ಮೊದಲು ಎರಡು ಗಂಟೆ ವಿಮಾನ ನಿಲ್ದಾಣದ ಮೇಲೆ ಸುತ್ತು ಹೊಡೆದಿತ್ತು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT