ಜಮ್ಮು: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ (63) ಹತ್ಯೆಗೆ ಯತ್ನ ನಡೆದ ಒಂದು ವಾರದಲ್ಲೇ, ಶ್ರೀನಗರದ ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಪ್ರಧಾನ ಕಚೇರಿಗೆ ನೀಡಿದ್ದ ಭದ್ರತೆಯನ್ನು ವಾಪಸ್ ಪಡೆದುಕೊಂಡಿರುವ ಬಗ್ಗೆ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಮಾರ್ಚ್ 11ರಂದು ನಡೆದ ಗುಂಡಿನ ದಾಳಿಯಲ್ಲಿ, ಫಾರೂಕ್ ಅಬ್ದುಲ್ಲಾ ಕೂದಲೆಳೆ ಅಂತರದಲ್ಲಿ ಪಾರಾಗಿದ್ದರು.

‘ಶ್ರೀನಗರದ ನವಾಯಿ ಸುಬುಹ್ ಸಂಕೀರ್ಣದಲ್ಲಿರುವ ನ್ಯಾಷನಲ್ ಕಾನ್ಫರೆನ್ಸ್ ಕಚೇರಿಗೆ ಸಾಮಾನ್ಯವಾಗಿ ವಾರದಲ್ಲಿ ಎರಡರಿಂದ ಮೂರು ದಿನ ಫಾರೂಕ್ ಅಬ್ದುಲ್ಲಾ ಭೇಟಿ ನೀಡುತ್ತಾರೆ. ಭದ್ರತೆಯನ್ನು ಪೂರ್ಣ ಪ್ರಮಾಣದಲ್ಲಿ ವಾಪಸ್ ಪಡೆದಿರುವುದನ್ನು ಅರಗಿಸಿಕೊಳ್ಳುವುದು ಕಷ್ಟ’ ಎಂದು ಒಮರ್ ಅಬ್ದುಲ್ಲಾ ಇಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

ಎನ್ಸಿ ಶಾಸಕರು ವಿಧಾನಸಭೆಯಲ್ಲಿ ಮಂಗಳವಾರ ಈ ವಿಷಯ ಪ್ರಸ್ತಾಪಿಸಿದ್ದು, ಅರ್ಧ ಗಂಟೆ ಚರ್ಚೆಯೂ ನಡೆಯಿತು. ‘ಜಮ್ಮು ಮತ್ತು ಕಾಶ್ಮೀರವನ್ನು ‘ಅಪಾಯ ಮುಕ್ತ’ ಎಂದು ಘೋಷಿಸಿ, ಇಲ್ಲವೇ ಎಲ್ಲರಿಗೂ ಭದ್ರತೆ ಖಾತರಿಪಡಿಸಿ’ ಎಂದು ಸ್ಪೀಕರ್ ಅಬ್ದುಲ್ ರಹೀಮ್ ರಾಥರ್ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.