ಶ್ರೀನಗರ: ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಅವರು ಗಾಂದರ್‌ಬಲ್ ಕ್ಷೇತ್ರದಿಂದ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಪಕ್ಷವು ಮಂಗಳವಾರ ತಿಳಿಸಿದೆ. ಇದಕ್ಕೂ ಮುನ್ನ ಅಬ್ದುಲ್ಲಾ ಅವರು ಈ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರು.
ಪಕ್ಷವು ಬುಧವಾರ ಅಬ್ದುಲ್ಲಾ ಸೇರಿದಂತೆ 32 ಅಭ್ಯರ್ಥಿಗಳನ್ನು ಒಳಗೊಂಡ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಒಮರ್ ಅಬ್ದುಲ್ಲಾ ಅವರು ಗಾಂದರ್‌ಬಲ್ ಕ್ಷೇತ್ರವನ್ನು 2009ರಿಂದ 2014ರವರೆಗೆ ಪ್ರತಿನಿಧಿಸಿದ್ದರು.
ಕಾಂಗ್ರೆಸ್ ಮತ್ತು ಎನ್‌ಸಿ ಸೀಟು ಹಂಚಿಕೆ ಬಳಿಕ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದ ಒಮರ್ ಅಬ್ದುಲ್ಲಾ ಅವರು, ಗಾಂದರ್‌ಬಲ್ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂಬ ತಮ್ಮ ನಿರ್ಧಾರವನ್ನು ಪುನರ್ ಪರಿಶೀಲಿಸುವ ಬಗ್ಗೆ ಸುಳಿವು ನೀಡಿದ್ದರು.