ನವದೆಹಲಿ: ಕೊರೊನಾವೈರಸ್‌ನ ರೂಪಾಂತರಿ ತಳಿಆಗಿ ಹೊರಹೊಮ್ಮಿ ಜಗತ್ತಿನಾದ್ಯಂತ ಆತಂಕ ಮೂಡಿಸಿರುವ ಓಮೈಕ್ರಾನ್ ತಳಿ ಇದೀಗ ಭಾರತದಲ್ಲೂ ಕಾಣಿಸಿಕೊಂಡಿದೆ.

ಈ ಬಗ್ಗೆ ಗುರುವಾರ ಕೇಂದ್ರ ಆರೋಗ್ಯ ಸಚಿವಾಲಯ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ಕರ್ನಾಟಕದಲ್ಲಿ ಇಬ್ಬರಿಗೆ ಓಮೈಕ್ರಾನ್ ತಗುಲಿದೆ ಎಂದು ಖಚಿತಪಡಿಸಿದೆ.

ಈ ಬೆನ್ನಲ್ಲೇ ಈ ವೈರಾಣುವಿನ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿರುವ ಕೇಂದ್ರ ಆರೋಗ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ಲವ ಅಗರವಾಲ್ ಅವರು, ‘ಓಮೈಕ್ರಾನ್ ಅಪಾಯಕಾರಿ ಹೌದೋ? ಅಲ್ಲವೋ? ಎಂಬುದು ಇನ್ನೂ ಖಚಿತವಾಗಿಲ್ಲ. ಈ ಬಗ್ಗೆ ವ್ಯಾಪಕ ಸಂಶೋಧನೆಗಳು ನಡೆಯುತ್ತಿವೆ. ಭಾರತದಲ್ಲಿ ಜನರು ಹೆದರಿಕೊಳ್ಳುವ ಅವಶ್ಯಕತೆ ಇಲ್ಲ’ ಎಂದು ಹೇಳಿದ್ದಾರೆ.

‘ಇದುವರೆಗೆ 29 ದೇಶಗಳಲ್ಲಿ 323 ಜನರಲ್ಲಿ ಓಮೈಕ್ರಾನ್ ಇರುವುದು ದೃಢಪಟ್ಟಿದೆ. ಇದರ ಸೋಂಕು ಕಂಡು ಬಂದವರಲ್ಲಿ ಮೆದು ಲಕ್ಷಣಗಳಿದ್ದು, ಮಾರಕವಾಗಿ ಯಾರಿಗೂ ಪರಿಣಮಿಸಿಲ್ಲ’ ಎಂದು ಅಗರವಾಲ್ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.

‘ಬೆಂಗಳೂರಿನಲ್ಲಿ ಇಬ್ಬರಿಗೆ ಓಮೈಕ್ರಾನ್ ಇರುವುದು ದೃಢಪಟ್ಟಿದ್ದು, ಅವರನ್ನು ನಿಗಾದಲ್ಲಿರಿಸಲಾಗಿದೆ. ಓಮೈಕ್ರಾನ್ ಕಂಡು ಬಂದಿರುವ ದೇಶಗಳಿಂದ ಬರುವವರನ್ನು ವಿಮಾನ ನಿಲ್ದಾಣಗಳಲ್ಲೇ ಆರ್‌ಟಿ–ಪಿಸಿಆರ್ ಪರೀಕ್ಷೆ ನಡೆಸಲಾಗುತ್ತೆ. ಒಂದು ವೇಳೆ ನೆಗೆಟಿವ್ ಕಂಡು ಬಂದರೂ ಸಹ ಅವರನ್ನು 7 ದಿನ ಹೋಂ ಕ್ವಾರಂಟೈನ್‌ನಲ್ಲಿ ಇರಿಸಲಾಗುತ್ತದೆ’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಬೆಂಗಳೂರು ಮೂಲಕ ಭಾರತಕ್ಕೂ ಎಂಟ್ರಿ ಕೊಟ್ಟ ಓಮೈಕ್ರಾನ್:ಕರ್ನಾಟಕದ ಇಬ್ಬರಲ್ಲಿ ಪತ್ತೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.