ನವದೆಹಲಿ: ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ಭಾರತ ಹಾಗೂ ಪಾಕಿಸ್ತಾನ ಸೈನ್ಯಗಳ ನಡುವಣ ಕದನ ವಿರಾಮವು 100ನೇ ದಿನಕ್ಕೆ ಕಾಲಿಡುತ್ತಿರುವಂತೆಯೇ ಭೂ ಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಮನೋಜ್ ಮುಕುಂದ್ ನರವಾಣೆ ಅವರು ಬುಧವಾರದಿಂದ ಎರಡು ದಿನಗಳ ಭೇಟಿ ಹಮ್ಮಿಕೊಂಡಿದ್ದಾರೆ.

ಗಡಿಯಲ್ಲಿ ಪರಿಸ್ಥಿತಿಯನ್ನು ಅವಲೋಕಿಸಲಿರುವ ಸೇನಾ ಮುಖ್ಯಸ್ಥರು ಕಣಿವೆಯಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಕುರಿತು ಪರಿಶೀಲಿಸಲಿದ್ದಾರೆ.

ಭಾರತ ಹಾಗೂ ಪಾಕಿಸ್ತಾನ ನಡುವಣ ಕದನ ವಿರಾಮ ಒಪ್ಪಂದವು ಫೆಬ್ರವರಿ ತಿಂಗಳ ಕೊನೆಯ ವಾರದಲ್ಲಿ ಎರಡೂ ಸೇನೆಗಳ ಮಿಲಿಟರಿ ಕಾರ್ಯಾಚರಣೆಯ ಮಹಾ ನಿರ್ದೇಶಕರ (ಡಿಜಿಎಂಒ) ಮಾತುಕತೆ ಮೂಲಕ ಪಾಲನೆ ಮಾಡಲಾಗಿತ್ತು. ಅಲ್ಲಿಂದ ಬಳಿಕ ಉಭಯ ದೇಶಗಳು ಕದನ ವಿರಾಮ ನಿಯಮವನ್ನು ಉಲ್ಲಂಘಿಸಿಲ್ಲ.

ಇದನ್ನೂ ಓದಿ:ನಿವೃತ್ತಿ ನಂತರ ‘ಸೂಕ್ಷ್ಮ ವಿಚಾರ’ ಹಂಚಿಕೆ ಮೇಲೆ ನಿರ್ಬಂಧ: ಕೇಂದ್ರ ಸರ್ಕಾರ

ಸೇನಾ ಮುಖ್ಯಸ್ಥರು ಸೇನೆಯ ಇತರ ಉನ್ನತ ಕಮಾಂಡರ್‌ಗಳ ಜೊತೆಗೆ ಕಣಿವೆಯಲ್ಲಿ ಭಯೋತ್ಪಾದನೆ ನಿಗ್ರಹ ಮತ್ತು ಒಳನುಸುಳಿವಿಕೆಯ ನೈಜ ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

ಒಳನುಸುಳುವಿಕೆಗೆ ಭಯೋತ್ಪಾದಕರು ಮಾಡುವ ಯಾವುದೇ ಪ್ರಯತ್ನವನ್ನು ಮಟ್ಟ ಹಾಕಲು ಸೈನ್ಯ ಕಾರ್ಯಾಚರಣೆಯ ಸನ್ನದ್ಧತೆಯನ್ನು ಪರಿಶೀಲಿಸಲು ಗಡಿಗೆ ಸೇನಾ ಮುಖ್ಯಸ್ಥರು ಭೇಟಿ ಕೊಡಲಿದ್ದಾರೆ.

ಕದನ ವಿರಾಮ ಒಪ್ಪಂದದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮುಖ್ಯ ಪಾತ್ರ ವಹಿಸಿದ್ದು, ಕಳೆದ ಕೆಲವು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಇಷ್ಟು ದೀರ್ಘಾವದಿಯ ವರೆಗೆ ಗಡಿಯಲ್ಲಿ ಶಾಂತಿ ನೆಲೆಸಿದೆ.

2003ನೇ ಇಸವಿಯಲ್ಲಿ ಕದನ ವಿರಾಮ ನಿಯಮ ಒಪ್ಪಂದಕ್ಕೆ ಸಹಿ ಹಾಕಿದ್ದರೂ ಪದೇ ಪದೇ ಉಲ್ಲಂಘಿಸಲಾಗಿತ್ತು. ಕೆಲವು ತಿಂಗಳುಗಳ ಹಿಂದೆಯಷ್ಟೇ ನಡೆದ ಮಾತುಕತೆಯಲ್ಲಿ ಜಂಟಿ ಹೇಳಿಕೆಯ ಮೂಲಕ ಉಭಯ ಸೇನೆಗಳು ಕದನ ವಿರಾಮ ಘೋಷಣೆ ಮಾಡಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.