ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜನವರಿ 2ಕ್ಕೆ ನಡೆಯಬೇಕಿದ್ದ ‘ಸ್ತ್ರೀ ಶಕ್ತಿ ಸಂಗಮಮ್‌’ ಕಾರ್ಯಕ್ರಮ ಮುಂದೂಡಿಕೆ:BJP

Published 19 ಡಿಸೆಂಬರ್ 2023, 13:42 IST
Last Updated 19 ಡಿಸೆಂಬರ್ 2023, 13:42 IST
ಅಕ್ಷರ ಗಾತ್ರ

ತಿರುವನಂತಪುರಂ: ‘ಮಹಿಳಾ ಮೀಸಲಾತಿ ಮಸೂದೆ ಜಾರಿಯನ್ನು ಯಶಸ್ವಿಗೊಳಿಸಿದ್ದಕ್ಕಾಗಿ ಘಟಕವು ‘ಸ್ತ್ರೀ ಶಕ್ತಿ ಸಂಗಮಮ್‌’ ಎಂಬ ಬೃಹತ್ ಸಮಾವೇಶವನ್ನು ಜ. 2ರಂದು ಆಯೋಜಿಸಿತ್ತು. ಆದರೆ ಇದೀಗ ದಿನಾಂಕವನ್ನು ಮುಂದೂಡಲಾಗಿದೆ' ಎಂದು ಕೇರಳ ಬಿಜೆಪಿ ಘಟಕದ ಅಧ್ಯಕ್ಷ ಕೆ. ಸುರೇಂದ್ರನ್ ಹೇಳಿದ್ದಾರೆ.

ಜ. 2ಕ್ಕೆ ನಿಗದಿಯಾಗಿದ್ದ ಸಮಾವೇಶವನ್ನು ಜನವರಿ 3ಕ್ಕೆ ಮುಂದೂಡಲಾಗಿದೆ. ಪ್ರಧಾನಿ ಮೋದಿ ಅವರ ಕಾರ್ಯಕ್ರಮದ ವೇಳಾಪಟ್ಟಿಯಲ್ಲಿ ಕೊಂಚ ಬದಲಾವಣೆಯಾಗಿದೆ ಎಂದು ಸುರೇಂದ್ರನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ತ್ರಿಶೂರ್‌ನ ತೆಕ್ಕಿನಾಡು ಮೈದಾನದಲ್ಲಿ ಸಮಾವೇಶ ನಡೆಯಲಿದೆ. ಇದರಲ್ಲಿ ಅಂಗನವಾಡಿ ಶಿಕ್ಷಕಿಯರು, ಆಶಾ ಕಾರ್ಯಕರ್ತೆಯರು, ಉದ್ಯಮಿಗಳು, ನರೇಗಾ ಕಾರ್ಮಿಕರು, ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕರ್ತರು ಸೇರಿದಂತೆ ಹಲವು ಕ್ಷೇತ್ರಗಳ ಮಹಿಳೆಯರು ಪಾಲ್ಗೊಳ್ಳಲಿದ್ದಾರೆ’ ಎಂದು ಹೇಳಿದ್ದಾರೆ.

‘ಈ ಸಮಾವೇಶದ ಮುಖ್ಯ ಉದ್ದೇಶವೇ ಮಹಿಳಾ ಮೀಸಲಾತಿಗಾಗಿ ಪ್ರಧಾನಿಗೆ ಅಭಿನಂದನೆ ಸಲ್ಲಿಸುವುದಾಗಿದೆ‘ ಎಂದು ತಿಳಿಸಿದ್ದಾರೆ.

‘ಸಮಾವೇಶದಲ್ಲಿ ಸುಮಾರು ಎರಡು ಲಕ್ಷ ಮಹಿಳೆಯರು ಭಾಗವಹಿಸುವ ನಿರೀಕ್ಷೆ ಇದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ’ ಎಂದು ಹೇಳಿದ್ದಾರೆ.

‘ದಕ್ಷಿಣ ಭಾರತದಲ್ಲಿ ಯಾವ ರಾಜ್ಯವೂ ಇಷ್ಟು ದೊಡ್ಡ ಮಟ್ಟದ ಮಹಿಳಾ ಸಮಾವೇಶವನ್ನು ಆಯೋಜಿಸಿಲ್ಲ‘ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT