ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡು ಮಳೆ: ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು PM ಮೋದಿಗೆ ಸ್ಟಾಲಿನ್ ಮನವಿ

Published 2 ಜನವರಿ 2024, 13:07 IST
Last Updated 2 ಜನವರಿ 2024, 13:07 IST
ಅಕ್ಷರ ಗಾತ್ರ

ತಿರುಚಿರಾಪಳ್ಳಿ: ತಮಿಳುನಾಡಿನಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಸಾಕಷ್ಟು ನಷ್ಟ ಉಂಟಾಗಿದ್ದು, ಹಾನಿಗೆ ಪರಿಹಾರ ರೂಪದಲ್ಲಿ ಕೇಂದ್ರ ವಿಪತ್ತು ನಿರ್ವಹಣಾ ನಿಧಿಯಿಂದ ಹಣ ಬಿಡುಗಡೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮನವಿ ಸಲ್ಲಿಸಿದ್ದಾರೆ.

ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲು ತಮಿಳುನಾಡಿಗೆ ಮಂಗಳವಾರ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ಟಾಲಿನ್ ಮನವಿ ಸಲ್ಲಿಸಿದರು.

‘ಚೆನ್ನೈ ಹಾಗೂ ರಾಜ್ಯದ ದಕ್ಷಿಣದ ಭಾಗದಲ್ಲಿ ಸುರಿದ ಭಾರೀ ಮಳೆ ಸೃಷ್ಟಿಸಿದ ಸಮಸ್ಯೆಯ ಮಾಹಿತಿ ನಿಮಗೆ ಗೊತ್ತೇ ಇದೆ. ಈ ಭಾಗದಲ್ಲಿನ ಮೂಲಸೌಕರ್ಯ ಸಂಪೂರ್ಣ ಹಾಳಾಗಿದೆ. ನೆರೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಇವೆಲ್ಲವನ್ನೂ ಸರಿಪಡಿಸಲು ಅಗತ್ಯ ಅನುದಾನ ಬೇಕಾಗಿದ್ದು, ಕೇಂದ್ರವು ಕೂಡಲೇ ಬಿಡುಗಡೆ ಮಾಡಬೇಕು’ ಎಂದು ಕೋರಿದ್ದಾರೆ.

‘ಇದರೊಂದಿಗೆ ತಮಿಳುನಾಡು ಮಳೆ ದುರಂತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಪ್ರಧಾನಿಗೆ ಸ್ಟಾಲಿನ್ ಮನವಿ ಮಾಡಿದ್ದಾರೆ’ ಎಂದು ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT