ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾತಕಿ ಛೋಟಾ ರಾಜನ್ ಗುಂಪಿನ ಸದಸ್ಯ 28 ವರ್ಷಗಳ ಬಳಿಕ ಸೆರೆ

Published 7 ಅಕ್ಟೋಬರ್ 2023, 11:04 IST
Last Updated 7 ಅಕ್ಟೋಬರ್ 2023, 11:04 IST
ಅಕ್ಷರ ಗಾತ್ರ

ಮುಂಬೈ: ಕಳೆದ 28 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಭೂಗತ ಪಾತಕಿ ಛೋಟಾ ರಾಜನ್ ಗುಂಪಿನ ಸದಸ್ಯನೊಬ್ಬನನ್ನು ಮುಂಬೈ ಪೊಲೀಸರು ಶನಿವಾರ ಬಂಧಿಸಿದ್ದಾರೆ. 

1994ರಲ್ಲಿ ನಡೆದಿದ್ದ ದರೋಡೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಶಬಿರ್ ಬರ್ಕತಲಿ ಲಖಾನಿ (59) ಎಂಬಾತನನ್ನು ಗುಜರಾತ್‌ನ ಸೂರತ್‌ನಲ್ಲಿ ಮುಂಬೈ ಅಪರಾಧ ಘಟಕದ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಪಾತಕಿ ಛೋಟಾ ರಾಜನ್ ಗುಂಪಿನ ಸದಸ್ಯನಾಗಿದ್ದ ಈತ ಸೇರಿದಂತೆ ನಾಲ್ವರು 1994ರಲ್ಲಿ ದರೋಡೆ ಮಾಡುವ ಉದ್ದೇಶದಿಂದ ಮುಂಬೈ ಹೊರವಲಯದಲ್ಲಿರುವ ಚೆಂಬೂರ್‌ನಲ್ಲಿರುವ ರಿಯಲ್ ಎಸ್ಟೇಟ್ ಮಧ್ಯವರ್ತಿಯೊಬ್ಬರ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಕರ್ತವ್ಯದಲ್ಲಿದ್ದ ಅಪರಾಧ ಘಟಕದ ಅಧಿಕಾರಿಯೊಬ್ಬರ ಮೇಲೆ ದಾಳಿ ಮಾಡಿದ್ದರು. ಈ ಸಂಬಂಧ ಆರೋಪಿಗಳ ವಿರುದ್ಧ ದರೋಡೆಗೆ ಯತ್ನ, ಹತ್ಯೆಗೆ ಯತ್ನ ಸೇರಿದಂತೆ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿತ್ತು. ಈ ಕೃತ್ಯದಲ್ಲಿ ಭಾಗಿಯಾದ ಐವರಿಗೆ ಸ್ಥಳೀಯ ನ್ಯಾಯಾಲಯವು ಐದು ವರ್ಷ ಸಜೆ ವಿಧಿಸಿತ್ತು. 

ಈ ಪ್ರಕರಣದ ಐವರು ಆರೋಪಿಗಳ ಪೈಕಿ ಮೂವರನ್ನು ಪೊಲೀಸರು ಎನ್‌ಕೌಂಟರ್ ಮಾಡಿದ್ದರು. ಆದರೆ, ಲಖಾನಿ ಹಾಗೂ ಮತ್ತೊಬ್ಬ ಅಪರಾಧಿಯು 1995ರಲ್ಲಿ ತಲೆ ಮರೆಸಿಕೊಂಡಿದ್ದರು. ಈ ಇಬ್ಬರ ವಿರುದ್ಧ ನ್ಯಾಯಾಲಯದ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿತ್ತು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT