ನವದೆಹಲಿ: ಗಣರಾಜ್ಯೋತ್ಸವದ ದಿನರೈತರ ಟ್ರ್ಯಾಕ್ಟರ್ ರ‍್ಯಾಲಿ ವೇಳೆ ಕೆಂಪುಕೋಟೆಯಲ್ಲಿ ನಡೆದ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಒಬ್ಬನನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತನನ್ನು ಧರ್ಮೇಂದ್ರ ಸಿಂಗ್ ಎಂದು ಗುರುತಿಸಲಾಗಿದೆ. ಕೆಂಪುಕೋಟೆ ಮೇಲೆ ಅನ್ಯ ಧ್ವಜ ಹಾರಿಸಿದ ಪ್ರಕರಣದಲ್ಲಿ ಈತನ ಪಾತ್ರವಿದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ಪಿಟಿಐಗೆ ತಿಳಿಸಿದ್ದಾರೆ.

ಇದನ್ನೂ ಓದಿ.. ದೆಹಲಿ ಹಿಂಸಾಚಾರ: 200 ಜನರನ್ನು ವಶಕ್ಕೆ ಪಡೆದು ವಿಚಾರಣೆ

ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಜನವರಿ 26ರಂದು ಟ್ರ್ಯಾಕ್ಟರ್ ಪೆರೇಡ್‌ಗೆ ರೈತರು ಕರೆ ನೀಡಿದ್ದರು. ಈ ಸಂದರ್ಭ ನಿಗದಿತ ಮಾರ್ಗದ ಒಪ್ಪಂದವನ್ನು ಮೀರಿ ರೈತರು ದೆಹಲಿ ಪ್ರವೇಶಿಸಿದ್ದರು. ಪೊಲೀಸರ ಜೊತೆ ಸಂಘರ್ಷಕ್ಕೆ ಇಳಿದಿದ್ದರು. ಬ್ಯಾರಿಕೇಡ್ ಮುರಿದು ಕಲ್ಲು ತೂರಾಟ ನಡೆಸಿದ್ದರು. ಘಟನೆಯಲ್ಲಿ 300ಕ್ಕೂ ಅಧಿಕ ಪೊಲೀಸರು ಗಾಯಗೊಂಡಿದ್ದರು.

ಇದೇವೇಳೆ, ಹಲವು ರೈತರು ಟ್ರ್ಯಾಕ್ಟರ್ ಓಡಿಸಿಕೊಂಡು ಕೆಂಪು ಕೋಟೆ ಪ್ರವೇಶಿಸಿದ್ದರು. ದಾಂಧಲೆ ನಡೆಸಿ, ಸ್ತಬ್ಧಚಿತ್ರಗಳಿಗೆ ಹಾನಿ ಮಾಡಿದ್ದರು. ಬಳಿಕ ಅನ್ಯ ಧ್ವಜ ಹಾರಿಸಿದ್ದರು. ಪ್ರತಿಭಟನಾಕಾರರಿಂದ ತಪ್ಪಿಸಿಕೊಳ್ಳಲು ಪೊಲೀಸರೇ ಗೋಡೆ ಹಾರಿ ಕಂದಕಕ್ಕೆ ಧುಮುಕಿ ಓಡುತ್ತಿದ್ದ ವಿಡಿಯೊಗಳು ವೈರಲ್ ಆಗಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.