ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗುಜರಾತ್|ಗಣೇಶ ಮೂರ್ತಿಗೆ ಮಂಟಪ ಸಿದ್ಧಪಡಿಸುವಾಗ ವಿದ್ಯುತ್ ಸ್ಪರ್ಶ; ವ್ಯಕ್ತಿ ಸಾವು

Published : 4 ಸೆಪ್ಟೆಂಬರ್ 2024, 9:50 IST
Last Updated : 4 ಸೆಪ್ಟೆಂಬರ್ 2024, 9:50 IST
ಫಾಲೋ ಮಾಡಿ
Comments

ವಡೋದರಾ: ಗುಜರಾತ್‌ನ ವಡೋದರಾ ಜಿಲ್ಲೆಯ ದಬಕಾ ಗ್ರಾಮದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ಮಂಟಪ ಸಿದ್ಧಪಡಿಸುತ್ತಿದ್ದ ವೇಳೆ ವಿದ್ಯುತ್ ತಗುಲಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ರಾತ್ರಿ 11.45ರ ಸುಮಾರಿಗೆ ಗ್ರಾಮಸ್ಥರೆಲ್ಲ ಸೇರಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ಮಂಟಪ ಸಿದ್ಧಪಡಿಸುತ್ತಿದ್ದರು. ಇದೇ ಸಂದರ್ಭದಲ್ಲಿ ವಿದ್ಯುತ್ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮೃತ ವ್ಯಕ್ತಿಯನ್ನು ಪ್ರಕಾಶ್ ಜಾಧವ್ ಎಂದು ಗುರುತಿಸಲಾಗಿದೆ. ಜಾಧವ್ ಹಿಡಿದಿದ್ದ ಕಬ್ಬಿಣದ ರಾಡ್ ಹೈಟೆನ್ಷನ್ ತಂತಿಗೆ ತಗುಲಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT