ಗ್ಯಾಂಗ್ಟಾಕ್: 61 ವರ್ಷದ ಅಂಗವಿಕಲ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮೂವರು ಅಪ್ರಾಪ್ತರು ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಸಿಕ್ಕಿಂ ಪೊಲೀಸರು ತಿಳಿಸಿದ್ದಾರೆ.
ಆಗಸ್ಟ್ 26ರಂದು ಜೋರೆಥಾಂಗ್ ಟೌನ್ ಬಸ್ ಪಾರ್ಕಿಂಗ್ ಕಾಂಪ್ಲೆಕ್ಸ್‌ನಲ್ಲಿ ಈ ಘಟನೆ ನಡೆದಿದ್ದು, ಆರೋಪಿಗಳು ಕೃತ್ಯದ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.
ಮಹಿಳೆಯ ಕುಟುಂಬಸ್ಥರು ನೀಡಿದ ದೂರು ಆಧರಿಸಿ ಮೂವರು ಅಪ್ರಾಪ್ತರು ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯದ ಎದುರು ಹಾಜರುಪಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಈಚೆಗೆ ಕೇರಳದ ಕಾಯಂಕುಲಂ ಎಂಬಲ್ಲಿ 70 ವರ್ಷದ ವೃದ್ಧೆಯೊಬ್ಬರ ಮೇಲೆ ಮೆಣಸಿನ ಪುಡಿ ಎರಚಿ ಅತ್ಯಾಚಾರ ಎಸಗಿದ ಆರೋಪದ ಮೇಲೆ 29 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿತ್ತು.