ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ | ಗುಡಿಸಲಿಗೆ ಬೆಂಕಿ: ಓರ್ವ ಸಾವು, ಮತ್ತೊಬ್ಬರಿಗೆ ಗಾಯ

Published 19 ಡಿಸೆಂಬರ್ 2023, 2:30 IST
Last Updated 19 ಡಿಸೆಂಬರ್ 2023, 2:30 IST
ಅಕ್ಷರ ಗಾತ್ರ

ನವದೆಹಲಿ: ಪೂರ್ವ ದೆಹಲಿಯ ಶಕಾರ್‌ಪುರ ಪ್ರದೇಶದಲ್ಲಿ ಮೂರು ಗುಡಿಸಲಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಓರ್ವ ವ್ಯಕ್ತಿ ಮೃತ‍‍ಪಟ್ಟಿದ್ದಾರೆ. ವೃದ್ಧರೊಬ್ಬರಿಗೆ ಶೇ 30ರಷ್ಟು ಸುಟ್ಟಗಾಯಗಳಾಗಿವೆ.

ಬೆಂಕಿ ಹೊತ್ತಿಕೊಂಡಿರುವ ಬಗ್ಗೆ ಸೋಮವಾರ ರಾತ್ರಿ 8 ಗಂಟೆ ವೇಳೆಗೆ ಶಕರ್‌ಪುರ ಪೊಲೀಸ್ ಠಾಣೆಗೆ ಮಾಹಿತಿ ಬಂದಿದೆ. ಕೂಡಲೇ ನಾವು ಕಾರ್ಯಪ್ರವೃತ್ತರಾದೆವು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸ್ಥಳದಲ್ಲಿದ್ದ ಟೈರ್‌ಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಬಳಿಕ ಅದರ ಜ್ವಾಲೆ ಸಮೀಪದ ಗುಡಿಸಲಿಗೆ ವ್ಯಾಪಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಗುಡಿಸಲಿನೊಳಗೆ ಮಲಗಿದ್ದ ನಾತು ಲಾಲ್ (62) ಅವರಿಗೆ ಶೇ 30ರಷ್ಟು ಸುಟ್ಟ ಗಾಯಗಳಾಗಿದ್ದು, ಅವರನ್ನು ರಕ್ಷಣೆ ಮಾಡಲಾಗಿದೆ. ಬೆಂಕಿ ನಂದಿಸಿದ ಬಳಿಕ ಸುಟ್ಟು ಕರಕಲಾದ ಒಂದು ದೇಹವನ್ನು ಹೊರತೆಗೆಯಲಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಮೃತಪಟ್ಟವರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಘಟನೆ ಸಂಬಂಧ ತನಿಖೆ ಆರಂಭಿಸಲಾಗಿದ್ದು, ಕಾರಣ ಪತ್ತೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT