ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನದಲ್ಲಿ ತೇಜಸ್ ಚೀತಾ ಸಾವು: ಮೃತ ಚೀತಾಗಳ ಸಂಖ್ಯೆ 7

ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನದಲ್ಲಿ ಮಂಗಳವಾರ ‘ತೇಜಸ್‌’ ಹೆಸರಿನ ನಾಲ್ಕು ವರ್ಷದ ಗಂಡು ಚೀತಾ ಮೃತಪಟ್ಟಿದೆ.
Published 11 ಜುಲೈ 2023, 20:14 IST
Last Updated 11 ಜುಲೈ 2023, 20:14 IST
ಅಕ್ಷರ ಗಾತ್ರ

ಭೋಪಾಲ್: ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನದಲ್ಲಿ ಮಂಗಳವಾರ ‘ತೇಜಸ್‌’ ಹೆಸರಿನ ನಾಲ್ಕು ವರ್ಷದ ಗಂಡು ಚೀತಾ ಮೃತಪಟ್ಟಿದೆ.

ಉದ್ಯಾನದಲ್ಲಿ ಚೀತಾ ಸರಣಿ ಸಾವು ಮುಂದುವರಿದಿದ್ದು, ದಕ್ಷಿಣ ಆಫ್ರಿಕಾದಿಂದ ತರಲಾಗಿದ್ದ ‘ತೇಜಸ್‌’ ಸಾವಿನೊಂದಿಗೆ ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ ಮೃತಪಟ್ಟ ಚೀತಾಗಳ ಸಂಖ್ಯೆ 7ಕ್ಕೇರಿದೆ. 

ಬೆಳಿಗ್ಗೆ ಚೀತಾದ ಕುತ್ತಿಗೆಯಲ್ಲಿ ಗಾಯಗಳಾಗಿರುವುದನ್ನು ಗಮನಿಸಿದ್ದ ಮೇಲ್ವಿಚಾರಣಾ ತಂಡವು ಈ ಬಗ್ಗೆ ವೈದ್ಯರ ಗಮನಕ್ಕೆ ತಂದಿತ್ತು. ಮಧ್ಯಾಹ್ನದ ವೇಳೆಗೆ ಅದು ಅಸುನೀಗಿದೆ.

‘ಚೀತಾ ಗಾಯಗೊಂಡಿದ್ದು ಹೇಗೆ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಮರಣೋತ್ತರ ಪರೀಕ್ಷೆಯ ಬಳಿಕ ಅದರ ಸಾವಿಗೆ ನಿಖರ ಕಾರಣ ಏನೆಂಬುದು ತಿಳಿಯಲಿದೆ’ ಎಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜೆ.ಸಿ. ಚೌಹಾಣ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT