ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಕ್ಷಣಾ ಪಡೆಗಳ ನಕಲಿ ಎನ್‌ಕೌಂಟರ್‌ ಪ್ರಕರಣ: ಸಿಬಿಐನಿಂದ ಮತ್ತೊಂದು ಆರೋಪಪಟ್ಟಿ

Last Updated 20 ಆಗಸ್ಟ್ 2018, 11:28 IST
ಅಕ್ಷರ ಗಾತ್ರ

ನವದೆಹಲಿ: ಮಣಿಪುರದಲ್ಲಿ ಸೇನೆ, ಅಸ್ಸಾಂ ರೈಫಲ್ಸ್‌ ಮತ್ತು ಪೊಲೀಸರಿಂದ ನಡೆದ ನಕಲಿ ಎನ್‌ಕೌಂಟರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ಸಿಬಿಐನ ವಿಶೇಷ ತನಿಖಾ ತಂಡ (ಎಸ್‌ಐಟಿ) ಸುಪ್ರೀಂಕೋರ್ಟ್‌ಗೆ ಸೋಮವಾರ ಮಾಹಿತಿ ನೀಡಿತು.

ಪ್ರಕರಣದ ವಿಚಾರಣೆ ನಡೆಯುತ್ತಿರುವ ನ್ಯಾಯಾಲಯಕ್ಕೆ ಈ ಸಂಬಂಧ ಎರಡು ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ಸಿಬಿಐ ಕಳೆದ ಜುಲೈ 30ರಂದು ಸುಪ್ರೀಂಕೋರ್ಟ್‌ಗೆ ಹೇಳಿತ್ತು.

ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಮದನ್‌ ಬಿ.ಲೋಕೂರ್‌ ಮತ್ತು ಯು.ಯು.ಲಲಿತ್‌ ನೇತೃತ್ವದ ಪೀಠ, ಪ್ರಕರಣದ ತನಿಖೆಯ ಪ್ರಗತಿ ಕುರಿತ ಮಾಹಿತಿಯನ್ನು ಸೆಪ್ಟೆಂಬರ್‌ 1ಕ್ಕೆ ಸಲ್ಲಿಸಬೇಕು ಎಂದು ಎಸ್‌ಐಟಿಗೆ ಸೂಚಿಸಿದ್ದಲ್ಲದೆ, ಸೆಪ್ಟೆಂಬರ್‌ 4ಕ್ಕೆ ವಿಚಾರಣೆ ಮುಂದುವರಿಸುವುದಾಗಿ ಹೇಳಿತು.

ಮಣಿಪುರದಲ್ಲಿ ಕಳೆದ ವರ್ಷ 1,528 ನಕಲಿ ಎನ್‌ಕೌಂಟರ್‌ ಪ್ರಕರಣಗಳು ದಾಖಲಾಗಿವೆ. ಈ ಸಂಬಂಧ ಸುಪ್ರೀಂಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT