ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳದಲ್ಲಿ ಮತ್ತೊಬ್ಬರಿಗೆ ನಿಪಾ ದೃಢ: ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆ

Published 15 ಸೆಪ್ಟೆಂಬರ್ 2023, 4:42 IST
Last Updated 15 ಸೆಪ್ಟೆಂಬರ್ 2023, 4:42 IST
ಅಕ್ಷರ ಗಾತ್ರ

ಕೋಯಿಕ್ಕೋಡ್ (ಕೇರಳ): ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ನಿಪಾ ಸೋಂಕಿನ ಮತ್ತೊಂದು ಪ್ರಕರಣ ದಾಖಲಾಗಿದೆ.

39 ವರ್ಷದ ವ್ಯಕ್ತಿಯೊಬ್ಬನಿಗೆ ನಿಪಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಪರೀಕ್ಷೆಗೆ ಕಳುಹಿಸಿದ್ದ ಅವರ ಮಾದರಿ ಪಾಸಿಟಿವ್ ಎಂದು ವರದಿ ಬಂದಿರುವುದಾಗಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರ ಕಚೇರಿ ಶುಕ್ರವಾರ ತಿಳಿಸಿದೆ.

ಸೋಂಕಿತ ವ್ಯಕ್ತಿಯನ್ನು ಆಸ್ಪತ್ರೆಯ ತೀವ್ರ ನಿಗಾದಲ್ಲಿ ಇರಿಸಲಾಗಿದೆ ಎಂದು ಕಚೇರಿ ತಿಳಿಸಿದೆ.

ನಿಪಾ ಸೋಂಕಿತರು ಚಿಕಿತ್ಸೆ ಪಡೆದಿದ್ದ ಆಸ್ಪತ್ರೆಯಲ್ಲೇ ಈ ವ್ಯಕ್ತಿಯು ಚಿಕಿತ್ಸೆ ಪಡೆದಿದ್ದರು ಎಂದು ಅದು ತಿಳಿಸಿದೆ.

ಇದರೊಂದಿಗೆ ಕೇರಳದ ಕೋಯಿಕ್ಕೋಡ್‌ನಲ್ಲಿ ನಿಪಾ ಸೋಂಕಿತರ ಸಂಖ್ಯೆ 6ಕ್ಕೇರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT