ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ವ್ಯಕ್ತಿ ಬಂಧನ

Last Updated 7 ಆಗಸ್ಟ್ 2022, 14:33 IST
ಅಕ್ಷರ ಗಾತ್ರ

ಬಾರ್ಪೆಟಾ, ಅಸ್ಸಾಂ: ‘ಬಾಂಗ್ಲಾದೇಶದ ‘ಅನ್ಸರುಲ್‌ ಇಸ್ಲಾಂ’ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಆರೋಪದಡಿ ಅಸ್ಸಾಂನ ಬಾರ್ಪೆಟಾ ಜಿಲ್ಲೆಯ ಅಬುಬಕರ್‌ ಎಂಬಾತನನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ.

‘ಆಗಸ್ಟ್‌ 3 ರಂದು ಅಬುಬಕರ್‌ ಶರಣಾಗಿದ್ದ. ಆತ ಅನ್ಸರುಲ್‌ ಇಸ್ಲಾಂ ಸಂಘಟನೆಯೊಂದಿಗೆ ನೇರ ಸಂಪರ್ಕ ಹೊಂದಿರುವುದು ವಿಚಾರಣೆಯಿಂದ ಗೊತ್ತಾಗಿತ್ತು. ಇದಕ್ಕೆ ಸಂಬಂಧಿಸಿದ ಸಾಕ್ಷ್ಯಗಳೂ ಲಭ್ಯವಾಗಿದ್ದವು. ಆತ ರೈತನ ಸೋಗಿನಲ್ಲಿ ಜಿಹಾದಿ ಚಟುವಟಿಕೆಗಳನ್ನು ನಡೆಸುತ್ತಿದ್ದ. ಹೀಗಾಗಿ ಶುಕ್ರವಾರ ಆತನನ್ನು ಬಂಧಿಸಲಾಗಿತ್ತು. ಶನಿವಾರ ನ್ಯಾಯಾಲಯದ ಎದುರು ಹಾಜರುಪಡಿಸಿ ಐದು ದಿನ ಕಸ್ಟಡಿಗೆ ಪಡೆಯಲಾಗಿದೆ’ ಎಂದು ಅವರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT