ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಉತ್ತರಾಖಂಡ: ಡೋಡಿತಾಲ್‌ ಪರ್ವತ ಚಾರಣಕ್ಕೆ ತೆರಳಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

Published 17 ಜೂನ್ 2024, 10:50 IST
Last Updated 17 ಜೂನ್ 2024, 10:50 IST
ಅಕ್ಷರ ಗಾತ್ರ

ಡೆಹರಾಡೂನ್‌: ಉತ್ತರಾಖಂಡದ ಉತ್ತರಕಾಶಿಯಲ್ಲಿರುವ ಡೋಡಿತಾಲ್‌ ಪರ್ವತಕ್ಕೆ ಚಾರಣಕ್ಕೆ ತೆರಳಿದ್ದ ವೇಳೆ ಚಾರಣಿಗರೊಬ್ಬರು ಮೃತಪಟ್ಟಿದ್ದು, ಇನ್ನೊಬ್ಬರನ್ನು ರಕ್ಷಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವೀರೇಂದ್ರ ಚೌಹಾಣ್‌ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಚಾರಣಕ್ಕೆ ತೆರಳಿದ್ದ ಸಂದರ್ಭದಲ್ಲಿ ಇವರಿಗೆ ಹೃದಯಾಘಾತವಾಗಿತ್ತು.

ಮಾಹಿತಿ ಸಿಕ್ಕ ತಕ್ಷಣ ರಾಜ್ಯ ವಿಪತ್ತು ನಿರ್ವಹಣಾ ತಂಡ ಸ್ಥಳಕ್ಕೆ ತೆರಳಿ ಮೃತ ಚಾರಣಿಗನ ಮೃತದೇಹವನ್ನು ಪಡೆದು ಜಿಲ್ಲಾ ಪೊಲೀಸ್‌ ಕೇಂದ್ರಕ್ಕೆ ನೀಡಿದೆ.

ಚಾರಣಕ್ಕೆ ತೆರಳಿದ್ದ ಇನ್ನೊಬ್ಬರನ್ನು ಉತ್ತರಕಾಶಿ ಮೂಲದ ಕಾಂತಿ ನುಟಿಯಾಲ್‌ ಎಂದು ಗುರುತಿಸಲಾಗಿದೆ. ಅವರು ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT