ಶೋಪಿಯಾನ್ (ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನ ಕಥೋಹಾಲನ್ ಪ್ರದೇಶದಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಭಯೋತ್ಪಾದಕನನ್ನು ಗುರುವಾರ ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರ ಜಿಲ್ಲೆಯ ಕಥೋಹಲನ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಭದ್ರತಾ ಪಡೆಯ ಸಿಬ್ಬಂದಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪಡೆಗಳು ಕಾರ್ಯಾಚರಣೆಗೆ ಮುಂದಾಗುತ್ತಿದ್ದಂತೆ ಉಗ್ರರು ಅವರ ಮೇಲೆ ಗುಂಡಿನ ದಾಳಿ ನಡೆಸಿದರು ಎಂದೂ ಅವರು ಹೇಳಿದ್ದಾರೆ.
ಕಾಶ್ಮೀರ ವಲಯ ಪೊಲೀಸರ ಪ್ರಕಾರ, ಭಯೋತ್ಪಾದಕನ ಬಳಿ ಇದ್ದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಸೇರಿದಂತೆ ಸಂಘಟನೆಗೆ ಸೇರಿದ ಕೆಲ ವಸ್ತುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.
‘ನಿಷೇಧಿತ ಭಯೋತ್ಪಾದಕ ಸಂಘಟನೆ ಟಿಆರ್‌ಎಫ್ ಜೊತೆ ಗುರುತಿಸಿಕೊಂಡಿದ್ದ ಒಬ್ಬ ಭಯೋತ್ಪಾದಕನನ್ನು ಹೊಡೆದುರುಳಿಸಲಾಗಿದೆ. ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಸೇರಿದಂತೆ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಡಗಿರುವ ಉಗ್ರರಿಗಾಗಿ ಹುಡುಕಾಟ ನಡೆಯುತ್ತಿದೆ’ಎಂದು ಕಾಶ್ಮೀರ ವಲಯ ಪೊಲೀಸರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.