ಹೈದರಾಬಾದ್: ಆನ್ಲೈನ್ನಲ್ಲಿ ಬೆಟ್ಟಿಂಗ್ ಹಾಗೂ ಜೂಜಾಟಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನಟ ರಾಣಾ ದಗ್ಗುಬಾಟಿ ಅವರು ನಗರದ ಜಾರಿ ನಿರ್ದೇಶನಾಲಯದ (ಇ.ಡಿ) ಎದುರು ಸೋಮವಾರ ವಿಚಾರಣೆಗೆ ಹಾಜರಾಗಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ವಿಜಯ್ ದೇವರಕೊಂಡ ಆಗಸ್ಟ್ 6ರಂದು ವಿಚಾರಣೆಗೆ ಹಾಜರಾಗಿದ್ದರು. ಪ್ರಕಾಶ್ ರಾಜ್ ಅವರು ಜುಲೈ 30ರಂದು ವಿಚಾರಣೆಗೆ ಹಾಜರಾಗಿದ್ದರು. ಇವರೊಂದಿಗೆ ನಟಿ ಲಕ್ಷ್ಮಿ ಮಂಚು ಅವರಿಗೂ ವಿಚಾರಣೆಗೆ ಹಾಜರಾಗುವಂತೆ ಇ.ಡಿ ನೋಟಿಸ್ ನೀಡಲಾಗಿದೆ.

ಬೆಟ್ಟಿಂಗ್ ಆ್ಯಪ್ಗಳ ಪ್ರಚಾರಕ್ಕೆ ಸಂಬಂಧಿಸಿ ನಟರು ಹಾಗೂ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಗಳ ವಿರುದ್ಧ 5 ರಾಜ್ಯಗಳಲ್ಲಿ ದಾಖಲಾಗಿರುವ ಎಫ್ಐಆರ್ಗಳ ಆಧಾರದ ಮೇಲೆ ಇ.ಡಿ ವಿಚಾರಣೆ ನಡೆಸುತ್ತಿದೆ.

ನಟಿ ಮಂಚು ಲಕ್ಷ್ಮಿ, ನಿಧಿ ಅಗರ್ವಾಲ್, ಪ್ರಣೀತಾ ಸುಭಾಶ್, ಅನನ್ಯಾ ನಾಗಲ್ಲಾ, ಟಿ.ವಿ ನಿರೂಪಕಿ ಶ್ರೀಮುಖಿ ಹೆಸರುಗಳೂ ಪ್ರಕರಣದಲ್ಲಿ ಇವೆ.

ಈ ಆ್ಯಪ್ಗಳು ಅಕ್ರಮ ಬೆಟ್ಟಿಂಗ್ ಮತ್ತು ಜೂಜಾಟದಿಂದ ಕಾನೂನು ಬಾಹಿರವಾಗಿ ಕೋಟ್ಯಂತರ ರೂಪಾಯಿ ಗಳಿಸಿವೆ ಎಂಬ ಆರೋಪವಿದೆ ಎಂದು ಮೂಲಗಳು ಹೇಳಿವೆ.
.ಆನ್ಲೈನ್ ಬೆಟ್ಟಿಂಗ್: ನಟ, ನಟಿಯರು ಸೇರಿ 29 ಜನರ ವಿರುದ್ಧ ED ಪ್ರಕರಣ.ಆನ್ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಇ.ಡಿ ವಿಚಾರಣೆಗೆ ಹಾಜರಾದ ವಿಜಯ್ ದೇವರಕೊಂಡ.ಆನ್ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಇ.ಡಿ ವಿಚಾರಣೆಗೆ ಹಾಜರಾದ ನಟ ಪ್ರಕಾಶ್ ರಾಜ್.ಬೆಟ್ಟಿಂಗ್ ಆ್ಯಪ್ ಪ್ರಕರಣ:ಇ.ಡಿ ವಿಚಾರಣೆಗೆ ರಾಣಾ ದಗ್ಗುಬಾಟಿ ಗೈರು;ಮತ್ತೆ ಸಮನ್ಸ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.