ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Online Fraud | ಆನ್‌ಲೈನ್‌ ವಂಚಕರಿಂದ ₹3.70 ಕೋಟಿ ವಶಪಡಿಸಿಕೊಂಡ ಮುಂಬೈ ಪೊಲೀಸರು

Published 9 ಜನವರಿ 2024, 5:59 IST
Last Updated 9 ಜನವರಿ 2024, 5:59 IST
ಅಕ್ಷರ ಗಾತ್ರ

ಮುಂಬೈ: ಆನ್‌ಲೈನ್‌ ವಂಚನೆಗೊಳಗಾದ ಮಹಿಳೆಯ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಮುಂಬೈ ಪೊಲೀಸರು, ವಂಚಕರ ಖಾತೆಗೆ ವರ್ಗಾವಣೆಯಾಗಬೇಕಿದ್ದ ₹ 3.70 ಕೋಟಿಯನ್ನು ತಡೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ

ಜನವರಿ 4ರಂದು ಈ ಘಟನೆ ನಡೆದಿದೆ. ಮುಂಬೈಯಲ್ಲಿ ವಾಸವಿದ್ದ ಮಹಿಳೆಯೊಬ್ಬರು ಸ್ಟಾಕ್ ಹೂಡಿಕೆಯಲ್ಲಿ ಹೆಚ್ಚಿನ ಲಾಭ ಗಳಿಸಬಹುದು ಎಂಬ ಸೈಬರ್ ವಂಚಕರ ಜಾಲಕ್ಕೆ ಸಿಲುಕಿದ್ದರು.

ಮೋಸ ಹೋಗಿರುವುದು ತಿಳಿಯುತ್ತಿದ್ದಂತೆ ಎಚ್ಚೆತ್ತ ಮಹಿಳೆ ತಕ್ಷಣವೇ ಮುಂಬೈ ಅಪರಾಧ ವಿಭಾಗದ ಸೈಬರ್ ಪೊಲೀಸ್ ಠಾಣೆಗೆ ಕರೆ ಮಾಡಿ ದೂರು ಸಲ್ಲಿಸಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತ್ವರಿತವಾಗಿ ಕ್ರಮಕೈಗೊಂಡಿದ್ದಾರೆ. ಸಂಬಂಧಿಸಿದ ಬ್ಯಾಂಕಿನ ನೋಡಲ್ ಅಧಿಕಾರಿಯೊಂದಿಗೆ ಮಾತನಾಡಿ ಹಣ ವರ್ಗಾವಣೆಗೆ ಬಳಸಿದ ಖಾತೆಗಳನ್ನು ಫ್ರೀಜ್ ಮಾಡುವ ಮೂಲಕ ₹3.67 ಕೋಟಿ ತಡೆ ಹಿಡಿದಿದ್ದಾರೆ.

2023ರಲ್ಲಿ ಸೈಬರ್ ವಂಚಕರಿಂದ ಕಳೆದುಕೊಂಡಿದ್ದ ₹26.48 ಕೋಟಿ ಅನ್ನು ಸಂತ್ರಸ್ತರಿಗೆ ಹಿಂತಿರುಗಿಸುವಲ್ಲಿ ಮುಂಬೈ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT