ನವದೆಹಲಿ: ಆನ್ಲೈನ್ ಬೆಟ್ಟಿಂಗ್ನಂತಹ ಚಟುವಟಿಕೆಗಳನ್ನು ನಿಷೇಧಿಸುವುದು ಅವುಗಳ ಕಾರ್ಯಾಚರಣೆ ಉತ್ತೇಜಿಸುವುದು ಹಾಗೂ ಜಾಹೀರಾತು ಪ್ರಕಟಿಸುವುದನ್ನು ನಿಷೇಧಿಸುವ ‘ಆನ್ಲೈನ್ ಗೇಮಿಂಗ್ ನಿಷೇಧ’ ಕಾಯ್ದೆ ಅಕ್ಟೋಬರ್ 1 ರಿಂದ ಜಾರಿಯಾಗಲಿದೆ ಎಂದು ಐಟಿ ಸಚಿವ ಅಶ್ವಿನಿ ವೈಷ್ಣವ್ ಗುರುವಾರ ತಿಳಿಸಿದ್ದಾರೆ.

ಕಳೆದ ತಿಂಗಳು ಸಂಸತ್ನಲ್ಲಿ ಈ ಮಸೂದೆ ಅಂಗೀಕರಿಸಲಾಗಿತ್ತು.

ಭಾರತದಲ್ಲಿ ಎಐ ಪರಿಣಾಮ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಆನ್ಲೈನ್ ಗೇಮಿಂಗ್ ಉದ್ಯಮಿಗಳ ಜತೆಗೆ ಸರ್ಕಾರ ಮಾತುಕತೆ ನಡೆಸಿದೆ. ಮಸೂದೆ ಅಂಗೀಕಾರವಾದ ಬಳಿಕವೂ ಮಾತುಕತೆ ಮುಂದುವರಿದಿದೆ. ಇನ್ನೊಂದು ಸುತ್ತಿನ ಮಾತುಕತೆಗೂ ಸರ್ಕಾರ ಸಿದ್ಧವಿದೆ. ಅದಾಗ್ಯೂ ಅವರಿಗೆ ಇನ್ನೂ ಸ್ವಲ್ಪ ಸಮಯ ಬೇಕಾದರೆ, ನಾವು ಖಂಡಿತವಾಗಿಯೂ ಕೊಡುತ್ತೇವೆ. ಆದರೆ ಈ ಸಮಯದಲ್ಲಿ, ಅಕ್ಟೋಬರ್ 1 ರಿಂದ ಹೊಸ ಕಾಯ್ದೆಯ ಅನುಷ್ಠಾನವನ್ನು ಪ್ರಾರಂಭಿಸುವ ಗುರಿಯನ್ನು ನಾವು ಹೊಂದಿದ್ದೇವೆ ಎಂದರು.
.Online Gaming Bill 2025: ಲೋಕಸಭೆಯಲ್ಲಿ ಆನ್ಲೈನ್ ಗೇಮಿಂಗ್ ಮಸೂದೆ ಅಂಗೀಕಾರ.
ಆನ್ಲೈನ್ ಗೇಮ್ ಆಡುವುದನ್ನು ವ್ಯಸನವನ್ನಾಗಿ ಮಾಡಿಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಆನ್ಲೈನ್ ಗೇಮಿಂಗ್ ಆ್ಯಪ್ಗಳ ಮೂಲಕ ಹಣ ಅಕ್ರಮ ವರ್ಗಾವಣೆ ಹಾಗೂ ಹಣಕಾಸು ವಂಚನೆ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಕಾಯ್ದೆ ಸಿದ್ಧಪಡಿಸಿದೆ.
.Online Gaming Bill 2025: ಇ–ಆಟಕ್ಕೆ ಕಾನೂನು ಅಸ್ತ್ರ; ಜೂಜಾಡಿದರೆ ಕಠಿಣ ಕ್ರಮ.ಆಳ –ಅಗಲ | ಆನ್ಲೈನ್ ಜೂಜಾಟ: ಪೂರ್ಣವಿರಾಮ ಸಾಧ್ಯವೇ?.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.